ಹೊಸ ರೇಷನ್ ಕಾರ್ಡ್ ಅರ್ಜಿದಾರರಿಗೆ ಸಿಹಿ ಸುದ್ದಿ; ಕಾರ್ಡ್ ವಿತರಣೆಯಲ್ಲಿ ಸರ್ಕಾರ ಮಹತ್ವದ ನಿರ್ಧಾರ

ಗೃಹಲಕ್ಷ್ಮಿ ಯೋಜನೆಗೆ (Gruha Lakshmi scheme) ಅಥವಾ ಅನ್ನಭಾಗ್ಯ ಯೋಜನೆಯ (Annabhagya scheme) ಹಣ ಪಡೆದುಕೊಳ್ಳಲು ರೇಷನ್ ಕಾರ್ಡ್ (Ration card) ಬಹಳ ಮುಖ್ಯ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ, ಹಾಗಾಗಿ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳುವುದಕ್ಕೆ ಹಾಗೂ ಹೀಗಿರುವ ರೇಷನ್ ಕಾರ್ಡ್ ನಲ್ಲಿ ಮುಖ್ಯ ತಿದ್ದುಪಡಿ ಮಾಡಿಕೊಳ್ಳುವುದಕ್ಕೆ ಜನ ಮುಂದಾಗಿದ್ದಾರೆ.

ಇದೀಗ ಇಂತಹ ನಿರೀಕ್ಷೆಯಲ್ಲಿ ಇರುವವರಿಗೆ ರಾಜ್ಯ ಆಹಾರ ಇಲಾಖೆ ಸಿಹಿ ಸುದ್ದಿ ಒಂದನ್ನು ಕೊಟ್ಟಿದೆ, ಬಿಪಿಎಲ್ ಕಾರ್ಡ್ (BPL card) ಎಪಿಎಲ್ ಕಾರ್ಡ್ (APL Card correction) ತಿದ್ದುಪಡಿಗೆ ಮತ್ತೆ ಅವಕಾಶ ಮಾಡಿ ಕೊಡಲಾಗಿದೆ.

ಜೊತೆಗೆ ಹೊಸದಾಗಿ ಯಾರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಹರಿದ್ದಾರೋ ಅಂಥವರಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಡಲಾಗುವುದು.

ಸ್ಟೇಟಸ್ ಚೆಕ್ ಮಾಡಿದಾಗ ಈ ರೀತಿ ತೋರಿಸಿದ್ರೆ ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣವೂ ಬರೋಲ್ಲ

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ ಸರ್ಕಾರ:

ಅನ್ನಭಾಗ್ಯ ಯೋಜನೆಯ ಲಾಭ ಪಡೆದುಕೊಳ್ಳಲು ಬಿಪಿಎಲ್ ಕಾರ್ಡ್ ಇರಲೇಬೇಕು, ಇನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರೂ.2000ಗಳನ್ನ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ (Ration Card Correction) ಮಾಡಿಕೊಳ್ಳುವುದು ಬಹಳ ಮುಖ್ಯ.

ಯಾಕಂದ್ರೆ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ನಲ್ಲಿ ಮಹಿಳೆ ಮನೆಯ ಮುಖ್ಯ ಸದಸ್ಯೆ ಆಗಿರಬೇಕು. ಈ ತಿದ್ದುಪಡಿ ಮಾಡಿಕೊಳ್ಳಲು ಸರ್ಕಾರ ಈ ಹಿಂದೆ 14 ದಿನಗಳ ಅವಕಾಶ ಮಾಡಿಕೊಟ್ಟಿತ್ತು.

ಆದರೆ ಸರ್ವರ್ ಸಮಸ್ಯೆಯಿಂದಾಗಿ (Government server problem) ಎಲ್ಲರ ರೇಷನ್ ಕಾರ್ಡ್ ತಿದ್ದುಪಡಿ ಸಾಧ್ಯವಾಗಿಲ್ಲ. ಒಟ್ಟು 3.18 ಲಕ್ಷ ಫಲಾನುಭವಿಗಳು ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು. ಇವುಗಳಲ್ಲಿ ಸುಮಾರು 1.17 ಲಕ್ಷ ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಹೊಸ ರೂಲ್ಸ್! ಏನು ಗೊತ್ತಾ?

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ;

Ration Card Correctionಸೆಪ್ಟೆಂಬರ್ 14ರವರೆಗೆ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು, ಆದರೆ ಅಗತ್ಯ ಇರುವ ಎಲ್ಲರ ರೇಷನ್ ಕಾರ್ಡ್ ನಲ್ಲಿ ಬದಲಾವಣೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಹಾಗಾಗಿ ಈಗ ಮತ್ತೆ ತಿದ್ದುಪಡಿ ದಿನಾಂಕವನ್ನು ಸರ್ಕಾರ ವಿಸ್ತರಿಸಿದೆ.

ಆದರೆ ಈ ಬಾರಿ ವಲಯವಾರು ತಿದ್ದುಪಡಿ ಅವಕಾಶ ಮಾಡಲಾಗಿದ್ದು ಅಗತ್ಯವಿರುವ ಪ್ರದೇಶದಲ್ಲಿ ಮೂರು ದಿನಗಳ ತಿದ್ದುಪಡಿ ಅವಕಾಶ ಮಾಡಿಕೊಡಲಾಗಿದೆ.

ಅಕ್ಟೋಬರ್ 5 ನೇ ತಾರೀಖಿನಿಂದ ಅಕ್ಟೋಬರ್ 13ರ ವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಳಿಗ್ಗೆ 10 ರಿಂದ ಸಂಜೆ 7:00 ವರೆಗೂ ರೇಷನ್ ಕಾರ್ಡ್ ತಿದ್ದುಪಡಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಮಾತ್ರವಲ್ಲದೆ, ಬೆಂಗಳೂರು ಒನ್ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಇಂಥವರಿಗೆ ರೇಷನ್ ಕಾರ್ಡ್ ಸಿಗೋದಿಲ್ಲ, ಇರೋ ರೇಷನ್ ಕಾರ್ಡ್ ಕೂಡ ರದ್ದಾಗುತ್ತೆ; ರಾತ್ರೋರಾತ್ರಿ ಆದೇಶ

ಯಾವೆಲ್ಲ ತಿದ್ದುಪಡಿ ಮಾಡಬಹುದು?

• ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಾಗಿ ರೇಷನ್ ಕಾರ್ಡ್ ನಲ್ಲಿ ಮೊದಲು ಸದಸ್ಯ ಮಹಿಳೆ ಆಗಿರಬೇಕು ಪುರುಷರ ಹೆಸರಿನಲ್ಲಿ ರೇಷನ್ ಕಾರ್ಡ್ ಇದ್ದರೆ ಮಹಿಳೆಯ ಹೆಸರಿಗೆ ಬದಲಾಯಿಸಿಕೊಳ್ಳಬಹುದು.

• ವಿಳಾಸದಲ್ಲಿ ವ್ಯತ್ಯಾಸವಿದ್ದರೆ ಅಥವಾ ವಿಳಾಸ ಬದಲಾಗಬೇಕಿದ್ದರೆ ಅದನ್ನು ಮಾಡಿಸಿಕೊಳ್ಳಬಹುದು.

• ಹೊಸ ಸದಸ್ಯರ ಸೇರ್ಪಡೆ ಹಾಗೂ ಮೃತಪಟ್ಟ ಸದಸ್ಯರ ಹೆಸರನ್ನು ತೆಗೆದು ಹಾಕಬಹುದು. ಮರಣ ಪ್ರಮಾಣ ಪತ್ರ ನೀಡಬೇಕು.

• ರೇಷನ್ ಕಾರ್ಡ್ ತಿದ್ದುಪಡಿಗೆ ರೇಷನ್ ಕಾರ್ಡ್ ನ ಜೆರಾಕ್ಸ್ ಕಾಪಿ ತೆಗೆದುಕೊಂಡು ಹೋದರೆ ಸಾಕು. ಜೊತೆಗೆ ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವುದು ಕಡ್ಡಾಯ. ಇನ್ನು ತಂಬ್ ಇಂಪ್ರೆಷನ್ ತಿದ್ದುಪಡಿಗೆ ಬಹಳ ಮುಖ್ಯವಾಗಿದ್ದು ರಿಜಿಸ್ಟರ್ ಆಗಿರುವ ಮೊಬೈಲ್ ಸಂಖ್ಯೆಗೆ ಓಟಿಪಿ (OTP) ಬರುವುದರಿಂದ ನೀವು ಆ ಮೊಬೈಲ್ ಕೂಡ ಜೊತೆಯಲ್ಲಿ ಕೊಂಡೊಯ್ಯಬೇಕು.

ಒಂದೇ ಕ್ಲಿಕ್ ನಲ್ಲಿ ತಿಳಿದುಕೊಳ್ಳಿ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮಾ ಆಗಿದೆಯೋ ಇಲ್ಲವೋ!

ಹೊಸ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆ

ಈಗಾಗಲೇ ರಾಜ್ಯದಲ್ಲಿ ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ, ಇವುಗಳ ಪರಿಶೀಲನೆ ಕೂಡ ನಡೆಯುತ್ತಿದೆ. ಇನ್ನು ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಅರ್ಜಿ ತೆಗೆದುಕೊಳ್ಳುತ್ತಿಲ್ಲ.

ಆದಾಗ್ಯೂ ಅನಾರೋಗ್ಯದ ತುರ್ತುಪರಿಸ್ಥಿತಿಯಲ್ಲಿ, ಆಸ್ಪತ್ರೆಯಲ್ಲಿ ಆಪರೇಷನ್ (Operation) ಮೊದಲಾದವುಗಳಿಗೆ ರೇಷನ್ ಕಾರ್ಡ್ ಅಗತ್ಯವಾಗಿದ್ದರೆ ಅಂತವರು ಕೂಡಲೇ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು. ನೀವು ನೀಡುವ ಮೆಡಿಕಲ್ ಕಾರಣ (Medical reason) ನೈಜವಾಗಿದ್ದರೆ ಅದನ್ನು ಪರಿಶೀಲಿಸಿ ತಕ್ಷಣವೇ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.

Important decision of the government in distribution of new ration card

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories