ಇಂದಿನಿಂದ ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ
ಬೆಳಗಾವಿ (Belagavi) ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಸಭೆ ಅಧಿವೇಶನ ಗುರುವಾರ ಸಂಜೆ ಮುಕ್ತಾಯಗೊಂಡಿದೆ. ಇದೇ ತಿಂಗಳ 10ರಿಂದ ವಿಧಾನಸಭೆ ಆರಂಭವಾಗಿತ್ತು. ಮಾಜಿ ಸಿಎಂ ಎಸ್.ಎಂ.ಕೃಷ್ಣ (SM Krishna) ನಿಧನದಿಂದ ಒಂದು ದಿನ ಸಭೆ ನಡೆಯಲಿಲ್ಲ. ಅಂತಿಮವಾಗಿ ಅದನ್ನು 8 ದಿನಗಳಿಗೆ ಸೀಮಿತಗೊಳಿಸಲಾಯಿತು.
ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವರು ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ನಡೆವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಸಭೆಗಳು ಒಂದು ದಿನ ಮುಂಚಿತವಾಗಿಯೇ ಮುಗಿದವು.
ಇನ್ನೊಂದೆಡೆ ಮಂಡ್ಯದಲ್ಲಿ ಸಮಾವೇಶಕ್ಕೆ ಅದ್ಧೂರಿ ವ್ಯವಸ್ಥೆ ಮಾಡಲಾಗುತ್ತಿದೆ. ಸಾಹಿತಿ ಗೊ.ರು. ಚೆನ್ನಬಸಪ್ಪ ಸಮ್ಮೇಳನದ ಅಧ್ಯಕ್ಷತೆ ವಹಿಸುವರು. ಜಗತ್ತಿನ ಎಲ್ಲೆಡೆಯಿಂದ ಕನ್ನಡಾಭಿಮಾನಿಗಳು, ಸಾಹಿತಿಗಳು ಬರುತ್ತಾರೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಕವಾಗಲಿವೆ. ಸಾವಿರಾರು ಅತಿಥಿಗಳಿಗೆ ಬೃಹತ್ ಉಪಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗುತ್ತಿದೆ.
Kannada Sahitya Sammelana in Mandya