ರಾಜ್ಯದ ಮಹಿಳೆಯರಿಗೆ ಬಿಗ್ ನ್ಯೂಸ್, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಸ್ವತಃ ರಾಜ್ಯದ ಸಿಎಂ ಕೊಟ್ರು ಸಿಹಿ ಸುದ್ದಿ

ನಮ್ಮ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು (Congress Government) ಮಹಿಳೆಯರಿಗಾಗಿ ಹೊರತಂದಿರುವ ಯೋಜನೆ ಗೃಹಲಕ್ಷ್ಮಿ ಯೋಜನೆ (Gruha Lakshmi Scheme) ಆಗಿದೆ. ಈಗಾಗಲೇ ಈ ಯೋಜನೆಗೆ ಅರ್ಜಿ ಸಲ್ಲಿಕೆ (Gruhalakshmi Application) ಪ್ರಕ್ರಿಯೆ ಶುರುವಾಗಿದ್ದು, ರಾಜ್ಯದ ಎಲ್ಲಾ ಮಹಿಳೆಯರು ಪ್ರತಿ ತಿಂಗಳು ₹2000 ರೂಪಾಯಿ ಪಡೆಯಲು ತುದಿಗಾಲಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ.
ಈಗ ಸಿಕ್ಕಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಸುಮಾರು 1.5ಕೋಟಿಗಿಂತ ಹೆಚ್ಚು ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಕೂಡ ಮಹಿಳೆಯರು ಅರ್ಜಿ ಸಲ್ಲಿಸುವುದು ಕಡಿಮೆ ಆಗಿಲ್ಲ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ಮನೆಯ ಯಜಮಾನಿಯರ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಬೇಕು ಎಂದು ಸರ್ಕಾರ ಬಹಳಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಹಾಗೆಯೇ ಅರ್ಜಿ ಹಾಕುವ ಪ್ರಕ್ರಿಯೆ ಸುಲಭವಾಗಬೇಕು ಎಂದು ಸರ್ಕಾರ ಮಹಿಳೆಯರಿಗೆ ಸಾಕಷ್ಟು ಪ್ರಯೋಜನ ಕೊಡುತ್ತಿದೆ.
ಈಗ ವಾಟ್ಸಾಪ್ ಮೂಲಕ ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿಕೊಟ್ಟಿದೆ. ಅದರ ಜೊತೆಗೆ ನಿನ್ನೆ ನಡೆದ ಸ್ವಾತಂತ್ರ್ಯ ದಿನಾಚರಣೆಯಂದು ಸರ್ಕಾರವು ಮಹಿಳೆಯರಿಗೆ ಹೊಸದೊಂದು ಗುಡ್ ನ್ಯೂಸ್ ನೀಡಿದೆ.
ಹೀಗೆ ವಾಟ್ಸಾಪ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಬಹಳ ಸುಲಭವಾಗಿ ಮಾಡಬಹುದು, ಹಾಗೆಯೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಯಾವುದೇ ಹಣ ಕೊಡಬೇಕಾಗಿಲ್ಲ. ಕರ್ನಾಟಕ ಒನ್ (Karnataka One), ಗ್ರಾಮ್ ಒನ್ (Grama One), ಬಾಪೂಜಿ ಕೇಂದ್ರ (Bapuji Kendra) ಇಲ್ಲೆಲ್ಲಾ ನೀವು ಉಚಿತವಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬೇಕಾಗಿರುವುದು ಬಿಪಿಎಲ್ ಕಾರ್ಡ್ (BPL Card) ಅಥವಾ ಅಂತ್ಯೋದಯ ಕಾರ್ಡ್ (Anthyodaya Card) ಮತ್ತು ಆಧಾರ್ ಕಾರ್ಡ್ (Aadhar Card) ಹಾಗೆಯೇ ನಿಮ್ಮ ಆಧಾರ್ ಕಾರ್ಡ್ ರೇಷನ್ ಕಾರ್ಡ್ ಗೆ ಲಿಂಕ್ ಆಗಿರಬೇಕು.
ಇಂತಹವರ ರೇಷನ್ ಕಾರ್ಡ್ ರದ್ದುಗೊಳಿಸಿ ಸರ್ಕಾರದ ಆದೇಶ, ನಿಮ್ಮ ಕಾರ್ಡ್ ಸ್ಥಿತಿ ಏನಾಗಿದೆ?

ಈಗ ಸಿದ್ದರಾಮಯ್ಯ (Siddaramaiah) ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ₹2000 ಹಣ ಮಹಿಳೆಯರ ಖಾತೆಗೆ ಯಾವಾಗ ಜಮೆ ಆಗುತ್ತದೆ ಎಂದು ಹೇಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು ಲಾಂಚ್ ಮಾಡುವ ದಿನಾಂಕವನ್ನು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದು, ಆಗಸ್ಟ್ 27ರಂದು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ ಎಂದು ಘೋಷಣೆ ಮಾಡಿದ್ದಾರೆ.
ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಆಪ್ರೋವ್ ಆಗಿದ್ಯಾ? ಯಾವುದಕ್ಕೂ ಒಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ನಮ್ಮ ರಾಜ್ಯದ 11 ಸಾವಿರ ಪ್ರದೇಶದಲ್ಲಿ ಗೃಹಲಕ್ಷ್ಮಿ ಯೋಜನೆ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಬಳಿಕ ಗೃಹಲಕ್ಷ್ಮಿ ಯೋಜನೆ ಬಗ್ಗೆ ಹೊಸ ವಿಚಾರ ತಿಳಿಸಿದ್ದಾರೆ.
Karnataka CM Announced Gruha Lakshmi Scheme Launch Date



