ಕರ್ನಾಟಕ ಹವಾಮಾನ: ಬೆಂಗಳೂರು, ಮೈಸೂರು, ಕೋಲಾರ ಸೇರಿದಂತೆ ಗುಡುಗು ಮಿಂಚು ಸಹಿತ ಮಳೆ

Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿದರೆ, ನವೆಂಬರ್ 23ರಿಂದ ಕೆಲವೆಡೆ ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಹವಾಮಾನ ಬದಲಾವಣೆಯ ನಿರೀಕ್ಷೆಯಿದೆ.

ಬೆಂಗಳೂರು (Bengaluru): ಕರ್ನಾಟಕದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ದಾವಣಗೆರೆಯಲ್ಲಿ ತಾಪಮಾನ 8 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ ಅತ್ಯಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ. ಬೆಳಗಿನ ಜಾವ ಚಳಿಯ ಪ್ರಭಾವ ಹೆಚ್ಚಿರುವುದರಿಂದ ಜನರು ಬೆಚ್ಚನೆಯ ಉಡುಪುಗಳನ್ನು ಧರಿಸಿ ಹೊರಬರುವಂತಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಒಣಹವೆ (Karnataka Weather) ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬರುವುದಿಲ್ಲ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆದರೆ, ಅದರ ನಂತರ ರಾಜ್ಯದ ಹಲವು ಭಾಗಗಳಲ್ಲಿ ರಾತ್ರಿ ಮತ್ತು ಬೆಳಗಿನ ತಾಪಮಾನ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸದ್ಯ ಮಳೆಯ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇದೇ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸದ್ಯ ಒಣಹವೆಯೇ ಇರಲಿದೆ.

ಆದರೆ, ನವೆಂಬರ್ 23ರಿಂದ ಹವಾಮಾನದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ತುಮಕೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain Update) ಸಾಧ್ಯತೆಯನ್ನೂ ಇಲಾಖೆ ತಿಳಿಸಿದೆ.

ಇನ್ನು ನವೆಂಬರ್ 24ರಿಂದ 27ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಸದ್ಯ ಚಳಿಯ ವಾತಾವರಣದ ನಡುವೆಯೇ ಮುಂದಿನ ದಿನಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಮಳೆಯೂ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories