ಕರ್ನಾಟಕದಲ್ಲಿ ಹೊಸದಾಗಿ 1,857 ಜನರಿಗೆ ಕೊರೊನಾ ದೃಢ

ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,33,276 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಜನರ ಸಾವು ಸಂಭವಿಸಿದೆ. ಅದರಂತೆ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36352 ಜನರ ಸಾವು ಸಂಭವಿಸಿದೆ.

ರಾಜ್ಯದಲ್ಲಿ 23,905 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.