ಕರ್ನಾಟಕ ರಾಜ್ಯ ಸರ್ಕಾರ (Karnataka Govt) ಇದೀಗ ಅನೇಕ ಸ್ಥಿರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಜನರಿಗೆ ದೊಡ್ಡ ಸಿಹಿ ಸುದ್ದಿಯನ್ನು ನೀಡಿದೆ. ಇನ್ನು ಗೃಹಲಕ್ಷ್ಮಿ ಯೋಜನೆಗಾಗಿ (Gruha Lakshmi Scheme) ರಾಜ್ಯ ಸರ್ಕಾರವು ಅರ್ಜಿಗಳ ಆಹ್ವಾನಿಸಿದೆ, ಈಗಾಗಲೇ 1.5 ಕೋಟಿಗೂ ಹೆಚ್ಚು ಗೃಹಣಿಯರು ಈ ಯೋಜನೆಯ ಲಾಭ ಪಡೆಯಲು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಈ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿಕೆ ಪ್ರತಿ ತಿಂಗಳು 2000 ಸಹಾಯ ಧನ ನೀಡುವುದಾಗಿ ಸರ್ಕಾರ ಈ ಹಿಂದೆ ಬರವಸೆ ನೀಡಿತ್ತು. ಇನ್ನು ಈ ಯೋಜನೆಯ ಲಾಭ ಪಡೆಯಲು ಇದೀಗ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಈಗಾಗಲೇ ಸರ್ಕಾರವೂ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಶುರು ಮಾಡಿದ್ದು, ಅರ್ಜಿ ಸಲ್ಲಿಸುವ ವೇಳೆ ಅನೇಕರು ತೊಂದರೆಗಳನ್ನು ಎದುರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇನ್ನು ಇದೆ ಕಾರಣದಿಂದ ಸರ್ಕಾರವೂ ಇದೀಗ ವಾಟ್ಸ್ ಆ್ಯಪ್ ಮೂಲಕ (WhatsApp Application) ಸಹ ಅರ್ಜಿ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನರಿಗೆ ಕಲ್ಪಿಸಿಕೊಟ್ಟಿದೆ. ಇನ್ನು ಅರ್ಜಿ ಸಲ್ಲಿಕೆದಾರರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಇನ್ನು ಕರ್ನಾಟಕದ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಿಗೆ ಭೇಟಿ ನೀಡಿ ನೀವು ಸುಲಭವಾಗಿ ಅರ್ಜಿಗಳನ್ನು ಸಲಿಸಬಹುದು.
ಗೃಹ ಲಕ್ಷ್ಮಿ ಯೋಜನೆಯ ಲಾಭವನ್ನು ಯಾವಾಗ ಪಡೆಯಬಹುದು ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದ್ದು, ರಾಜ್ಯದ ಜನರು ತಮ್ಮ ಖಾತೆಗೆ (Bank Account) 2000 ರೂಪಾಯಿ ಯಾವಾಗ ಜಮಾ ಆಗುತ್ತದೆ ಎಂದು ಕಾತುರದಿಂದ ಕಾದು ಕುಳಿತಿದ್ದಾರೆ.
ಇನ್ನು ಇದೀಗ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಡಿ ಕೆ ಶಿ, ಇದೆ ಆಗಸ್ಟ್ 27 ರಿಂದ ಗೃಹಲಕ್ಷ್ಮೀ ಯೋಜನೆಯನ್ನು ಬೆಳಗಾವಿಯಲ್ಲಿ ಚಾಲನೆ ಮಾಡಲಾಗುತ್ತಿದ್ದು, ಅದೇ ದಿನ ರಾಜ್ಯದ 11 ಸಾವಿರ ಕಡೆ ಈ ಯೋಜನೆಯ ಚಾಲನೆ ಮಾಡುವುದಾಗಿ ಹೇಳಿದ್ದಾರೆ.
ಬಾಡಿಗೆ ಕಟ್ಟಿ ಬೇಸತ್ತು ಹೋದ ಜನರಿಗೆ ಸರ್ಕಾರದ ಕಡೆಯಿಂದ ಹೊಸ ಭಾಗ್ಯ! ಅಷ್ಟಕ್ಕೂ ಏನಿದು ಹೊಸ ಯೋಜನೆ
ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆಗಳಲ್ಲಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎನ್ನಲಾಗಿದೆ. ಹಾಗೆ ಪಂಚಾಯತಿಗೋಬ್ಬರು ಆಫೀಸರ್ ಎನ್ನುವ ರೀತಿ ನೇಮಕ ಮಾಡಲಾಗಿದೆ.
ಇನ್ನು ಗೃಹ ಲಕ್ಷ್ಮೀ ಯೋಜನೆಗೆ ಬೇಕಾದ ದಾಖಲೆಗಳು ಈ ಕೆಳಗಿನಂತಿದೆ, ನಿಮ್ಮ ಆಧಾರ್ ಕಾರ್ಡ್ ಜೊತೆಗೆ ನಿಮ್ಮ ಬ್ಯಾಂಕ್ ಪಾಸ್ ಬುಕ್ ಅನ್ನು ಲಿಂಕ್ ಮಾಡಿರಬೇಕು. ಅಲ್ಲದೆ ನಿಮ್ಮ ಪ್ಯಾನ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅನ್ನು ನೀಡಿ ನೋಂದಾಯಿಸಿಕೊಳ್ಳಬೇಕು
Karnataka Govt Big Update on Gruha Lakshmi Yojana
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.