ಕಾಂಗ್ರೆಸ್ ಸರ್ಕಾರವು ಜನರಿಗೆ ಭರವಸೆ ನೀಡಿದ 5 ಯೋಜನೆಗಳನ್ನು (Govt Schemes) ಜಾರಿಗೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. 5 ಯೋಜನೆಗಳ ಬಗ್ಗೆ ಜನರಿಗೆ ಇದರ ಪ್ರಯೋಜನ ಹೇಗೆ ಸಿಗುತ್ತದೆ ಎನ್ನುವ ಬಗ್ಗೆ ಈಗಾಗಲೇ ಸರ್ಕಾರವು ಮಾಹಿತಿಗಳನ್ನು, ಹೊಸ ಅಪ್ಡೇಟ್ ಗಳನ್ನು ನೀಡುತ್ತಾ ಬರುತ್ತಿದೆ.
ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಈ ಬಗ್ಗೆ ಸಿಎಂ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಅವರು ಈಗಾಗಲೇ 4 ಯೋಜನೆಗಳನ್ನು ಬಹುತೇಕ ಜಾರಿಗೆ ತಂದಿದ್ದಾರೆ. ಶಕ್ತಿ ಯೋಜನೆಯ (Shakti Scheme) ಮೂಲಕ ಮಹಿಳೆಯರು ಉಚಿತ ಬಸ್ ಪ್ರಯಾಣವನ್ನು ಆನಂದಿಸುತ್ತಿದ್ದಾರೆ. ಇನ್ನು ಗೃಹಜ್ಯೋತಿ ಯೋಜನೆಯ (Gruha Jyothi Scheme) 200 ಯೂನಿಟ್ ಉಚಿತ ವಿದ್ಯುತ್ (Free Electricity) ಸಹ ಜನರಿಗೆ ಸಿಗುತ್ತಿದೆ.
ಹೊಸ ಬಿಪಿಎಲ್ ಕಾರ್ಡ್ ಅಪ್ಲೈ ಮಾಡಿರುವವರಿಗೆ ಸಿಹಿ ಸುದ್ದಿ! ರೇಷನ್ ಕಾರ್ಡ್ ವಿತರಣೆಗೆ ದಿನಾಂಕ ಫಿಕ್ಸ್
ಅನ್ನಭಾಗ್ಯ ಯೋಜನೆಯ (Annabhagya Yojane) ಅಡಿಯಲ್ಲಿ 5ಕೆಜಿ ಅಕ್ಕಿ ಮತ್ತು ಇನ್ನು 5ಕೆಜಿ ಅಕ್ಕಿಯ ಹಣವನ್ನು ಜನರ ಬ್ಯಾಂಕ್ ಅಕೌಂಟ್ ಗೆ ಹಾಕಲಾಗುತ್ತಿದೆ. ಇನ್ನು ಗೃಹಲಕ್ಷ್ಮಿ ಈ ತಿಂಗಳ ಅಂತ್ಯಕ್ಕೆ ಲಾಂಚ್ ಆಗುತ್ತಿದೆ.
ಈ ಎಲ್ಲಾ ಯೋಜನೆಗಳ ಜೊತೆಗೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮತ್ತೊಂದು ಮುಖ್ಯವಾದ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ರಾಜ್ಯದ ಸಣ್ಣ ನೇಕಾರರಿಗೆ ಸಹಾಯ ಆಗುವ ಹಾಗೆ 10 hp ವರೆಗು ಕರೆಂಟ್ ಅನ್ನು ಉಚಿತವಾಗಿ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಂಡಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.
ಈ ವಾರ ನೇಕಾರರ ನಿಯೋಗದ ಜೊತೆಗೆ ಸಿಎಂ ಅವರು ಸಭೆ ನಡೆಸಿದ್ದಾರೆ. ಅದರಲ್ಲಿ ಅವರ ಅಗತ್ಯತೆಗಳ ಬಗ್ಗೆ ಚರ್ಚೆ ನಡೆದಿದೆ..
ಅದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಉಚಿತ ಕರೆಂಟ್ ನೀಡುವ ಬಗ್ಗೆ ನಿರ್ಧಾರ ಮಾಡಿದ್ದಾರೆ. ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು, “ನೇಕಾರರ ಬಹುದಿನಗಳ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ (Free Electricity Bill) ಪೂರೈಕೆ ಮಾಡುವ ಮಹತ್ವದ ನಿರ್ಣಯ ಕೈಗೊಂಡಿದ್ದೇನೆ..” ಎಂದು ಟ್ವೀಟ್ ಮಾಡಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ! ಇನ್ಮುಂದೆ ನಿಮಗೆ ಸಿಗಲಿದೆ ಸರ್ಕಾರದ ಸಹಾಯ ಹಸ್ತ
ಇದು ನೇಕಾರರಿಗೆ ಸಂತೋಷದ ಸುದ್ದಿ ಎಂದೇ ಹೇಳಬಹುದು. ಹೀಗೆ ರಾಜ್ಯದ ಜನರಿಗೆ ಸಹಾಯ ಅಗುವಂಥ ಸಾಕಷ್ಟು ಯೋಜನೆಗಳನ್ನು ಸಿದ್ದರಾಮಯ್ಯ ಅವರು ತರುತ್ತಿದ್ದಾರೆ..
ಅಲ್ಲದೆ ರೇಷನ್ ಕಾರ್ಡ್ ಗೆ ಅರ್ಜಿ (Apply Ration Card) ಸಲ್ಲಿಸುವ ಪ್ರಕ್ರಿಯೆಯನ್ನು ಶುರು ಮಾಡಲಾಗಿದೆ. ಮಾತ್ರವಲ್ಲದೆ, ನಕಲಿ ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಪಡೆದಿರುವವರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿ, ಆ ನಿಟ್ಟಿನಲ್ಲಿಯೂ ಕೆಲಸ ಮಾಡಲಾಗುತ್ತಿದೆ. ಅಂಥ ರೇಷನ್ ಕಾರ್ಡ್ ಗಳನ್ನು ಕ್ಯಾನ್ಸಲ್ ಮಾಡಲಾಗುತ್ತಿದೆ.
Karnataka Govt Brought Changes in The Free Electricity Scheme
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.