ಜಾರಕಿಹೊಳಿ ಸಿಡಿ ಪ್ರಕರಣ: ಮೂವರು ಅಧಿಕಾರಿಗಳ ವಿರುದ್ಧ ತನಿಖಾ ಆದೇಶಕ್ಕೆ ಹೈಕೋರ್ಟ್ ತಡೆ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ಆದೇಶಿಸಿದ್ದ ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಗುರುವಾರ ಅಮಾನತುಗೊಳಿಸಿದೆ.

🌐 Kannada News :

ಬೆಂಗಳೂರು (Bengaluru) : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ವಿಚಾರಣೆಗೆ ಆದೇಶಿಸಿದ್ದ ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಗುರುವಾರ ಅಮಾನತುಗೊಳಿಸಿದೆ.

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಮತ್ತು ಕಬ್ಬನ್ ಪಾರ್ಕ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಬಿ. ಮಾರುತಿ ಅವರು ತಮ್ಮ ವಿರುದ್ಧದ ಮ್ಯಾಜಿಸ್ಟ್ರೇಟ್ ಆದೇಶ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ನಿನ್ನೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ನಗರದ 8ನೆ ಎಸಿಎಂಎಂ ಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

ಅರ್ಜಿದಾರರ ಪರ ವಕೀಲ ಪ್ರಸನ್ನಕುಮಾರ್ ವಾದ ಮಂಡಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸಿದ್ದು, ಅಂತಿಮ ವರದಿ ಸಲ್ಲಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ಮ್ಯಾಜಿಸ್ಟ್ರ್ರೇಟ್ ಕೋರ್ಟ್ ತನಿಖೆ ನಡೆಸಲು ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.ಇದನ್ನು ಪರಿಗಣಿಸಿದ ಪೀಠ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today