ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್ ಮತ್ತು ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ.

  • ಕರ್ನಾಟಕ ಆರೋಗ್ಯ ಇಲಾಖೆ ನೇಮಕಾತಿ ಒಂದು ತಿಂಗಳಲ್ಲಿ ಪೂರ್ಣ
  • ಖಾಲಿ ಹುದ್ದೆ ಭರ್ತಿಗೆ ಸಚಿವ ದಿನೇಶ್ ಗುಂಡೂರಾವ್ ಘೋಷಣೆ
  • ವೈದ್ಯರು, ನರ್ಸ್, ಫಾರ್ಮಸಿಸ್ಟ್ ಗುತ್ತಿಗೆ ಹಾಗೂ ನೇರ ನೇಮಕ

Karnataka Recruitment: ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಸೇವೆಗಳ ಬಲವರ್ಧನೆಗೆ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ನಿರೀಕ್ಷೆ ಮೂಡಿಸಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿರುವ ವೈದ್ಯಕೀಯ ಹುದ್ದೆಗಳ ನೇಮಕಕ್ಕೆ ಈಗ ವೇಗ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ವಿತರಣೆ, ಅರ್ಹರಿಗೆ ಶೀಘ್ರವೇ ಹೊಸ ಪಡಿತರ ಚೀಟಿ: ಸಚಿವ ಮುನಿಯಪ್ಪ

ವೈದ್ಯರ ನೇಮಕಕ್ಕೆ ವೇಗ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು ಮತ್ತು 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಜೊತೆಗೆ, ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರ್ಣಗೊಳಿಸಿದ ವೈದ್ಯರಿಗೆ ಒಂದು ವರ್ಷದ ಕಡ್ಡಾಯ ಸೇವಾ ಯೋಜನೆಯಡಿ ಸುಮಾರು 1500 ವೈದ್ಯರನ್ನು ನೇಮಕ ಮಾಡುವ ಪ್ರಕ್ರಿಯೆಯೂ ಆರಂಭವಾಗಿದೆ.

ನೇರ ನೇಮಕಾತಿಗೂ ಹಸಿರು ನಿಶಾನೆ

ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಹಾಗೂ 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಸಹಮತ ನೀಡಿದ್ದು, ಪ್ರಕ್ರಿಯೆ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಕ್ಕೆ ಸಂಬಂಧಿಸಿದ ಹೈಕೋರ್ಟ್ ಪ್ರಕರಣವೂ ಅಂತಿಮ ಹಂತ ತಲುಪಿದ್ದು, ಶೀಘ್ರದಲ್ಲೇ ತೀರ್ಮಾನ ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣ ಕಳ್ಳತನ ಪ್ರಕರಣಗಳಲ್ಲಿ ಬೆಂಗಳೂರು ದೇಶದಲ್ಲೇ ಮೊದಲ ಸ್ಥಾನ

ನರ್ಸ್ ಮತ್ತು ಫಾರ್ಮಸಿಸ್ಟ್ ಹುದ್ದೆಗಳ ಭರ್ತಿ

ಇದಲ್ಲದೆ, ರಾಜ್ಯಾದ್ಯಂತ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಸಿಸ್ಟ್‌ಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗುತ್ತದೆ. ಕೌನ್ಸಿಲಿಂಗ್ ಮೂಲಕ ಈ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸುವ ಗುರಿ ಇಟ್ಟುಕೊಳ್ಳಲಾಗಿದೆ.

ವಿವಿಧ ಇಲಾಖೆಗಳಿಗೆ ನಿಯೋಜನೆಯಾಗಿದ್ದ ವೈದ್ಯರು ಹಾಗೂ ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳನ್ನು ಮರಳಿ ಆರೋಗ್ಯ ಇಲಾಖೆಗೆ ಕರೆಸಿಕೊಳ್ಳುವ ನಿರ್ಧಾರವೂ ತೆಗೆದುಕೊಳ್ಳಲಾಗಿದೆ. ಅಗತ್ಯವಿರುವ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಇವರನ್ನು ನಿಯೋಜಿಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಸೇರಿ ಕರ್ನಾಟಕ ರಾಜ್ಯದಲ್ಲಿ ಚಳಿ ಅಬ್ಬರ! ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ

ರಾಜ್ಯದಲ್ಲಿ ಹೊಸ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಅಗತ್ಯತೆ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳ ಆಧಾರದಲ್ಲಿ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚನೆ ನೀಡಲಾಗಿದೆ.

TRENDING ARTICLES1 / 5

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories