ಕರ್ನಾಟಕ ಮಳೆ ಅಲರ್ಟ್: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಿಂಚು, ಗುಡುಗು, ಗಾಳಿ ಸಹಿತ ಮಳೆ ಅಬ್ಬರ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಜನರು ಮತ್ತು ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ

ಬೆಂಗಳೂರು (Bengaluru), ಸೆಪ್ಟೆಂಬರ್ 20: ಕರ್ನಾಟಕದಾದ್ಯಂತ (Karnataka Weather) ಮುಂದಿನ ಕೆಲವು ದಿನಗಳ ಕಾಲ ಮಳೆಯ ವಾತಾವರಣ (Rain Forecast) ಮುಂದುವರಿಯುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗಂಟೆಗೆ 30ರಿಂದ 50 ಕಿಲೋಮೀಟರ್‌ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಅದರಲ್ಲೂ ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ (Heavy Rain) ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳು ಯೆಲ್ಲೋ ಅಲರ್ಟ್‌ ವ್ಯಾಪ್ತಿಯಲ್ಲಿವೆ.

ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡದಲ್ಲಿ ಹಲವು ಕಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕೊಪ್ಪಳ ಮತ್ತು ಬೀದರ್ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ (Bengaluru) 40ರಿಂದ 50 ಕಿ.ಮೀ ವೇಗದ ಗಾಳಿಯೊಂದಿಗೆ ಭಾರಿ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ಬಳ್ಳಾರಿ, ಹಾಸನ, ರಾಮನಗರ, ಚಾಮರಾಜನಗರ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಮುಂದುವರಿಯಲಿದೆ.

ನಾಳೆಯೂ ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಬಹುದು. ಉತ್ತರ ಒಳನಾಡಿನ ರಾಯಚೂರು ಮತ್ತು ಬೀದರ್ ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ.

ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಚಿಕ್ಕಮಗಳೂರು, ರಾಮನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಬಹುದು.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories