ಸಚಿವ ಉಮೇಶ್ ಕತ್ತಿ ನಿಧನ
Umesh Katti : ಕರ್ನಾಟಕ ಸಚಿವ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
- ಕರ್ನಾಟಕದ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ
- 61 ವರ್ಷದ ಉಮೇಶ್ ಕತ್ತಿ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು
Umesh Katti : ಕರ್ನಾಟಕ ಸಚಿವ ಉಮೇಶ್ ಕತ್ತಿ (61) ಹೃದಯಾಘಾತದಿಂದ ನಿಧನ, ಹೌದು, ಉಮೇಶ್ ಕತ್ತಿ ಅವರು ನಿಧನರಾಗಿದ್ದಾರೆ. ಆಹಾರ ಇಲಾಖೆಯ ಸಚಿವ ಉಮೇಶ್ ಕತ್ತಿ ಅವರು ವಿಧಿವಶ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ (Holiday For Schools and Collages) ಇಂದು ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸರ್ಕಾರಿ ಕಚೇರಿಗಳಿಗೂ ರಜೆ ಘೋಷಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆದೇಶ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಉಮೇಶ್ ಕತ್ತಿ ಅವರು ಅರಣ್ಯ ಸಚಿವರಾಗಿದ್ದರು.
ಅರಣ್ಯ ಸಚಿವ ಉಮೇಶ್ ಕತ್ತಿ ಅವರು ಹೃಯಯಾಘಾತದಿಂದ (Heart Attack) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅವರು ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ (Bangalore Ramaiah Hospital) ಕೊನೆಯುಸಿರೆಳೆದಿದ್ದಾರೆ. ಉಮೇಶ್ ಕತ್ತಿ ಅವರು ತಮ್ಮ ಮನೆಯ ಬಾತ್ ರೂಮ್ನಲ್ಲಿ ಕುಸಿದು ಬಿದ್ದಿದ್ದರು ಎನ್ನಲಾಗಿದೆ. ತಕ್ಷಣಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು ತೀವ್ರ ಹೃದಯಾಘಾತ ಸಂಭವಿಸಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಉತ್ತರ ಕರ್ನಾಟಕಕ್ಕೆ ರಾಜ್ಯ ರಚನೆಯ ಕನಸು ಕಂಡಿದ್ದ ಬಿಜೆಪಿ ನಾಯಕ, ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
61 ವರ್ಷದ ಕತ್ತಿ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಿಂದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು.
ಕತ್ತಿಯವರ ಪಾರ್ಥೀವ ಶರೀರವನ್ನು ಹುಕ್ಕೇರಿಯ ವಿಶ್ವರಾಜ್ ಶುಗರ್ಸ್ ಆವರಣದಲ್ಲಿ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಅನುಕೂಲ ಮಾಡಿಕೊಡಲಾಗುವುದು. ಹುಕ್ಕೇರಿಯ ಬೆಲ್ಲದಬಾಗೇವಾಡಿಯಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಸಚಿವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಬೆಳಗಾವಿಯ ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಜನಿಸಿದ ಕತ್ತಿ, 1985ರಲ್ಲಿ ತಮ್ಮ ತಂದೆ ವಿಶ್ವನಾಥ ಕತ್ತಿಯವರ ಹೆಗಲು ತುಂಬಲು ರಾಜಕೀಯ ಪ್ರವೇಶಿಸಿ ಹುಕ್ಕೇರಿ ಕ್ಷೇತ್ರವನ್ನು ಪ್ರತಿನಿಧಿಸಿ ಎಂಟು ಬಾರಿ ಶಾಸಕರಾಗಿದ್ದರು.
“ರಾಜ್ಯವು ಪೂರ್ವಭಾವಿ ನಾಯಕ ಮತ್ತು ಜನರ ಬದ್ಧತೆಯ ಸೇವಕನಾಗಿದ್ದ ಒಬ್ಬ ನುರಿತ ರಾಜಕಾರಣಿಯನ್ನು ಕಳೆದುಕೊಂಡಿದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿ, ಕತ್ತಿಯನ್ನು “ನನ್ನ ನಿಕಟ ಸಹೋದ್ಯೋಗಿ” ಎಂದು ಬಣ್ಣಿಸಿದ್ದಾರೆ. 2008ರಲ್ಲಿ ಬಿಜೆಪಿ ಸೇರುವ ಮುನ್ನ ಕತ್ತಿ ಜನತಾ ಪಕ್ಷ, ಜನದಾ ದಳ, ಜೆಡಿ(ಯು) ಮತ್ತು ಜೆಡಿ(ಎಸ್) ಜೊತೆಗಿದ್ದರು.
ಇದು ಬಿಜೆಪಿ, ಬೆಳಗಾವಿ ಮತ್ತು ಕರ್ನಾಟಕಕ್ಕೆ ದೊಡ್ಡ ನಷ್ಟವಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.
ಕತ್ತಿ ಅವರು ಪತ್ನಿ ಶೀಲಾ, ಪುತ್ರ ನಿಖಿಲ್ ಹಾಗೂ ಪುತ್ರಿ ಸ್ನೇಹಾ ಅವರನ್ನು ಅಗಲಿದ್ದಾರೆ.
Karnataka Minister Umesh Katti dies of cardiac arrest
ನಿನ್ನೆ ತಡರಾತ್ರಿ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಶ್ರೀ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ತಿಳಿಸಲಾಯಿತು.
ಓಂ ಶಾಂತಿಃ pic.twitter.com/Eo3qeuxo3P
— Basavaraj S Bommai (@BSBommai) September 7, 2022
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
Follow us On
Google News |