ಇಂದು-ನಾಳೆ ಭರ್ಜರಿ ಮಳೆ; ಈ ಕರ್ನಾಟಕ ಜಿಲ್ಲೆಗಳಲ್ಲಿ ಗಾಳಿ ಸಹಿತ ವರ್ಷಧಾರೆ! ಹವಾಮಾನ ಇಲಾಖೆ ಎಚ್ಚರಿಕೆ
ಸೆಪ್ಟೆಂಬರ್ 2 ಮತ್ತು 3ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ.

ಬೆಂಗಳೂರು (Bengaluru News): ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚಟುವಟಿಕೆ (Karnataka Weather Today) ಮುಂದುವರಿದಿದ್ದು, ಸೆಪ್ಟೆಂಬರ್ 2 ಮತ್ತು 3ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ (Rain Alert) ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. (Weather Forecast)
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದ ಜನರು ಹವಾಮಾನ ಬದಲಾವಣೆಯ ಬಗ್ಗೆ ಗಮನಹರಿಸುವ ಅಗತ್ಯವಿದೆ.
ಉತ್ತರ ಒಳನಾಡಿನಲ್ಲೂ ವರ್ಷಧಾರೆ
ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜತೆಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ (Strong Winds) ಸಾಧ್ಯತೆಯನ್ನೂ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಸೆ.3ರಂದು ಪರಿಸ್ಥಿತಿ ಹೇಗಿರಲಿದೆ?
ಸೆಪ್ಟೆಂಬರ್ 3ರಂದು ಕೂಡ ಕರಾವಳಿ ಕರ್ನಾಟಕದ (Coastal Karnataka) ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲೂ ಕೆಲವೆಡೆ ಮಳೆ ಬೀಳಬಹುದು.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.
ಮಂಗಳೂರಿನಲ್ಲಿ 4 ಸೆಂ.ಮೀ. ಮಳೆ
ಹವಾಮಾನ ಇಲಾಖೆಯ ಮಾಹಿತಿಯಂತೆ, ಕರಾವಳಿ ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಸಾಮಾನ್ಯವಾಗಿದ್ದರೂ ಒಳನಾಡಿನಲ್ಲಿ ಮಳೆ (Rainfall) ತುಸು ದುರ್ಬಲವಾಗಿದೆ. ಮಂಗಳವಾರ ಸಂಜೆಗೆ ಅಂತ್ಯಗೊಂಡ 24 ಗಂಟೆಗಳಲ್ಲಿ ಮಂಗಳೂರಿನಲ್ಲಿ 4 ಸೆಂ.ಮೀ. ಮಳೆಯಾಗಿದೆ.
ಉಡುಪಿ ಜಿಲ್ಲೆಯ ಕೋಟಾದಲ್ಲಿ 4 ಸೆಂ.ಮೀ., ಬ್ರಹ್ಮಾವರದಲ್ಲಿ 3 ಸೆಂ.ಮೀ., ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 3 ಸೆಂ.ಮೀ. ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 3 ಸೆಂ.ಮೀ. ಮಳೆ ದಾಖಲಾಗಿದೆ.
ರಾಜ್ಯದಲ್ಲಿ ಮುಂದಿನ ದಿನಗಳಲ್ಲೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.



