ಕರ್ನಾಟಕ ಮಳೆ ಮುನ್ಸೂಚನೆ! ಛತ್ರಿ ರೆಡಿ ಇಟ್ಕೊಳ್ಳಿ, ಅ.5ರಂದು ಬೆಂಗಳೂರು ಸೇರಿ ಈ 4 ಜಿಲ್ಲೆಗಳಲ್ಲಿ ಭಾರೀ ಮಳೆ

Karnataka Weather: ಕರ್ನಾಟಕ ರಾಜ್ಯದಲ್ಲಿ ಮಳೆ ಮತ್ತು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಅಕ್ಟೋಬರ್ 5ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು (Bengaluru): ಕರ್ನಾಟಕ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೆಲವೆಡೆ ಮಳೆ (Karnataka Rains) ಚುರುಕಾಗಿದ್ದರೂ, ಬಹುತೇಕ ಪ್ರದೇಶಗಳಲ್ಲಿ ಬಿಸಿಲಿನ ವಾತಾವರಣ (Karnataka Weather) ಮುಂದುವರಿಯುವ ಸಾಧ್ಯತೆ ಇದೆ. ಇದರ ನಡುವೆ ಅಕ್ಟೋಬರ್ 5ರಂದು ನಾಲ್ಕು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಹೊಸ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸೋಕೆ ಕಾಯ್ತಾ ಇದ್ದೋರಿಗೆ ಭರ್ಜರಿ ಗುಡ್ ನ್ಯೂಸ್

ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ಮುಂದಿನ ಒಂದು ವಾರ ಬಹುತೇಕ ಕಡೆ ಬಿಸಿಲಿನ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ಮಧ್ಯಾಹ್ನದ ಬಳಿಕ ಕೆಲವೆಡೆ ಮೋಡ ಕವಿಯುವ ಸಾಧ್ಯತೆಯಿದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರಿನ ಕೆಲವು ಭಾಗಗಳಲ್ಲಿ ಸಂಜೆ ವೇಳೆಗೆ ಹಗುರ ಮಳೆಯಾಗಬಹುದು.

Karnataka Rains

ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿದೆ. ಹಲವು ಪ್ರದೇಶಗಳಲ್ಲಿ ಬೆಳೆಗಳಿಗೆ ಅಗತ್ಯ ತೇವಾಂಶ ಸಿಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಲದಲ್ಲೇ ಕೆರೆ-ಕಟ್ಟೆಗಳು ಒಣಗಿರುವುದು ಹಾಗೂ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿರುವುದು ಆತಂಕ ಹೆಚ್ಚಿಸಿದೆ.

ಇದೇ ವೇಳೆ ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳು ಬರಪೀಡಿತವಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು (Ajit Kumar Sahu) ನೇತೃತ್ವದ ಕೇಂದ್ರ ತಂಡ ಕರ್ನಾಟಕಕ್ಕೆ ಭೇಟಿ ನೀಡಿದೆ.

ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: 34.76 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ! ಇಲ್ಲಿದೆ ಕಾರಣ

ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸುಮಾರು 46 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದ್ದು, NDRF ಮಾನದಂಡಗಳಡಿ ಮೊದಲ ಹಂತದಲ್ಲಿ 3,705.30 ಕೋಟಿ ರೂಪಾಯಿ ಪರಿಹಾರ (NDRF Relief) ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ.

Bengaluru Rain

ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತುನಿಷ್ಠ ವರದಿ ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ಕೇಂದ್ರ ತಂಡದ ಮುಖ್ಯಸ್ಥರು ಭರವಸೆ ನೀಡಿದ್ದಾರೆ.

ಹವಾಮಾನ ಮುನ್ಸೂಚನೆಯ ಪ್ರಕಾರ ಬೆಂಗಳೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ 28 ಡಿಗ್ರಿ ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories