Karnataka Rain ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ

ಬೆಂಗಳೂರಿನಲ್ಲಿ ನವೆಂಬರ್ 23ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದಲ್ಲದೆ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನವೆಂಬರ್ 21ರವರೆಗೆ ಮಳೆ ಮುಂದುವರಿಯಲಿದೆ.

Karnataka Rain till November 23 : ಬೆಂಗಳೂರಿನಲ್ಲಿ ನವೆಂಬರ್ 23ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದಲ್ಲದೆ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ನವೆಂಬರ್ 21ರವರೆಗೆ ಮಳೆ ಮುಂದುವರಿಯಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ರಾಮನಗರದಲ್ಲಿ ನಿನ್ನೆ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಬೆಳಗಿನ ಜಾವ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ ಎಂದು ಐಎಂಡಿ ತಿಳಿಸಿದೆ.

ಬೆಂಗಳೂರಿನಲ್ಲಿ, ರಾಜ್ಯದ ಬಹುತೇಕ ಭಾಗವು ಏಕರೂಪದ ಮಳೆಯನ್ನು ಅನುಭವಿಸುತ್ತಿದೆ, ನವೆಂಬರ್ 23 ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಅಕಾಲಿಕ ಮಳೆಯು ಅನೇಕ ಹಾನಿಯನ್ನುಂಟುಮಾಡಿದೆ.

ತುಮಕೂರಿನಲ್ಲಿ ಸುರಿದ ಭಾರೀ ಮಳೆಗೆ ಈಗಾಗಲೇ ಅಪಾರ ಹಾನಿಯಾಗಿದೆ. ಕೃಷಿ ಭೂಮಿ ತೆನೆ ಬಿದ್ದಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಅದೇ ರೀತಿ ನಿನ್ನೆ ಶಿರಾ ಬಳಿ ಸರ್ಕಾರಿ ಬಸ್ ಸಿಕ್ಕಿಬಿದ್ದಿತ್ತು. ರಾಜ್ಯದೆಲ್ಲೆಡೆ ಜಲಾಶಯಗಳು ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

rainfall in Bangalore till November 23