Karnataka Covid-19: ಬೆಂಗಳೂರಿನಲ್ಲಿ 121 ಸೇರಿ, ರಾಜ್ಯದಲ್ಲಿ 129 ಕೊರೊನಾ ಪ್ರಕರಣಗಳು: ಸಾವು ಶೂನ್ಯ
Corona Cases in Karnataka: ಕಳೆದ 24 ಗಂಟೆಗಳಲ್ಲಿ 129 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,48,966ಕ್ಕೆ ಏರಿಕೆಯಾಗಿದೆ.
Corona Update in Karnataka: ರಾಜ್ಯದಲ್ಲಿ ಕೊರೊನಾ ಸೋಂಕಿತರ (Corona Cases) ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 129 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,48,966ಕ್ಕೆ ಏರಿಕೆಯಾಗಿದೆ.
ಮಹಾರಿಮಾ ಕರೋನಾದಿಂದ ರಾಜ್ಯದಲ್ಲಿ ಇಂದು (Corona Cases Today) ಯಾವುದೇ ಸಾವುಗಳು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 121 ಪ್ರಕರಣಗಳು (Bangalore Corona Cases) ದೃಢಪಟ್ಟಿವೆ. ನಗರದಲ್ಲಿ ಸೋಂಕಿತರ ಸಂಖ್ಯೆ 17,84,795 ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಾರ ರಾಜಧಾನಿಯಲ್ಲಿ ಇಂದು ಯಾವುದೇ ಸಾವುಗಳು ವರದಿಯಾಗಿಲ್ಲ.
ರಾಜ್ಯದಲ್ಲಿ 128 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,06935 ಕ್ಕೆ ಏರಿದೆ. 1926 ಸಕ್ರಿಯ ಪ್ರಕರಣಗಳಿವೆ.
ಇಂದಿನ 10/05/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/aJBM4o0x5L @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/qN48yEsnWE
— K'taka Health Dept (@DHFWKA) May 10, 2022
Follow Us on : Google News | Facebook | Twitter | YouTube