Karnataka Covid Cases, ಕರ್ನಾಟಕದಲ್ಲಿ 21,390 ಮಂದಿಗೆ ಕೊರೊನಾ ಸೋಂಕು..!

Karnataka Covid Cases, ಕರ್ನಾಟಕದಲ್ಲಿ ಇಂದು ಒಂದೇ ದಿನದಲ್ಲಿ 21,390 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು (Bangalore) : ಕರ್ನಾಟಕದಲ್ಲಿ (Karnataka) ಇಂದು ಒಂದೇ ದಿನದಲ್ಲಿ 21,390 ಮಂದಿಗೆ ಕೊರೊನಾ ಸೋಂಕು (Covid Cases) ತಗುಲಿರುವುದು ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಮಾಣ ವೇಗವಾಗಿ ಹೆಚ್ಚುತ್ತಿದೆ. ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 21,390 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.

ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 10 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ ಒಟ್ಟು 1,541 ಮಂದಿ ಕೊರೊನಾ ಸೋಂಕಿಗೆ ಒಳಗಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 93,009 ಜನರು ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪರಿಣಾಮ ಬೆಂಗಳೂರಿನಲ್ಲಿ 15 ಸಾವಿರದ ಸಮೀಪದಲ್ಲಿದೆ. ಬೆಂಗಳೂರು ಒಂದರಲ್ಲೇ 15,617 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ವೈರಾಣು ದಿಗ್ಭ್ರಮೆಗೊಳಿಸುವ ಪ್ರಮಾಣದಲ್ಲಿ ಹರಡುತ್ತಿರುವುದು ಆರೋಗ್ಯ ವಲಯ ಮತ್ತು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ಕರೋನಾ ಹರಡುವುದನ್ನು ತಡೆಯಲು ರಾಜ್ಯದಲ್ಲಿ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ.

 

Stay updated with us for all News in Kannada at Facebook | Twitter
Scroll Down To More News Today