ರಾಜ್ಯದಲ್ಲಿ ಕೊರೊನಾ : 315 ಹೊಸ ಪ್ರಕರಣ ಪತ್ತೆ, 236 ಚೇತರಿಕೆ, 2 ಸಾವು

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,95,600ಕ್ಕೆ ಏರಿಕೆಯಾಗಿದೆ.

236 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 6,831 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಮಾಡಿದೆ.

ಸೋಂಕಿನಿಂದ ಸಾವನ್ನಪಿದ ಇಬ್ಬರ ಸಾವಿನೊಂದಿಗೆ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 38,198 ಕ್ಕೆ ಏರಿದೆ. ಸೋಂಕಿನ ಪ್ರಮಾಣ 0.40 ಆಗಿದ್ದು. ಮರಣ ಪ್ರಮಾಣ 0.63 ಇದೆ. ಬೆಂಗಳೂರಿನಲ್ಲಿ ಒಟ್ಟು 152 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 142 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.

Stay updated with us for all News in Kannada at Facebook | Twitter
Scroll Down To More News Today