ಸಿಹಿಸುದ್ದಿ, ಬಡವರಿಗೆ ಸ್ವಂತ ನಿವೇಶನ; ಜನವರಿಯಿಂದಲೇ 5 ಲಕ್ಷ ಸೈಟ್ ಹಂಚಿಕೆ ಪ್ರಕ್ರಿಯೆ ಆರಂಭ
ರಾಜ್ಯದ ವಸತಿ ಸೌಲಭ್ಯವಿಲ್ಲದ ಬಡ ಕುಟುಂಬಗಳಿಗೆ ಸ್ವಂತ ನಿವೇಶನ ಕಲ್ಪಿಸಲು ಸರ್ಕಾರ ಸಿದ್ಧತೆ ನಡೆಸಿದೆ. 15 ಲಕ್ಷ ನಿವೇಶನಗಳ ಗುರಿಯಡಿ ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳನ್ನು ಹಂಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

- ಜನವರಿಯಲ್ಲಿ ಮೊದಲ ಹಂತದ ಹಂಚಿಕೆ
- 15 ಲಕ್ಷ ನಿವೇಶನಗಳ ಯೋಜನೆ
- 24 ಸಾವಿರ ಎಕರೆ ಜಮೀನು ಗುರುತು
ಬೆಂಗಳೂರು (Bengaluru): ಸ್ವಂತ ಜಮೀನು ಹೊಂದಬೇಕು, ಅದರಲ್ಲಿ ಮನೆ ಕಟ್ಟಿಕೊಳ್ಳಬೇಕು ಎಂಬ ಬಡ ಕುಟುಂಬಗಳ ಕನಸಿಗೆ ರಾಜ್ಯ ಸರ್ಕಾರ ಹೊಸ ಯೋಜನೆಯ ಮೂಲಕ ನೆರವಾಗಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮೊದಲ ಹಂತದ ಐದು ಲಕ್ಷ ನಿವೇಶನಗಳ ಹಂಚಿಕೆ ಪ್ರಕ್ರಿಯೆಯನ್ನು ಡಿಸೆಂಬರ್–ಜನವರಿ ಅವಧಿಯಲ್ಲಿ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ (Deputy CM) ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರಾಜ್ಯದಾದ್ಯಂತ 15 ಲಕ್ಷ ನಿವೇಶನಗಳನ್ನು ಒದಗಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 24 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಲಾಗಿದೆ. ಮುಂದಿನ ಹಂತದಲ್ಲಿ ಅರ್ಹ ಕುಟುಂಬಗಳನ್ನು ಆಯ್ಕೆ ಮಾಡಿ, ನಿವೇಶನಗಳ ಅಭಿವೃದ್ಧಿ ಮತ್ತು ಹಂಚಿಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದರ ಜೊತೆಗೆ ಸಾಮಾಜಿಕ ಭದ್ರತಾ ಪಿಂಚಣಿ (Social Security Pension) ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರಸ್ತುತ ಪಿಂಚಣಿ ಸೌಲಭ್ಯ ಪಡೆಯದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿದ್ದು, ಅವರ ಅರ್ಹತೆಯನ್ನು ಮತ್ತೊಮ್ಮೆ ಪರಿಶೀಲಿಸಲು ಸೂಚನೆ ನೀಡಲಾಗಿದೆ. ನಿಜವಾಗಿಯೂ ಪಿಂಚಣಿ ಪಡೆಯಲು ಅರ್ಹರಾಗಿರುವವರಿಗೆ ಸೌಲಭ್ಯ ಸಿಗಬೇಕು. ಅದೇ ರೀತಿ ಅನರ್ಹರು ಸರ್ಕಾರಿ ನೆರವು ಪಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಮತ್ತೊಂದೆಡೆ, ಬರದಿಂದ ತೊಂದರೆ ಅನುಭವಿಸುತ್ತಿರುವ ರೈತರಿಗೂ ತಕ್ಷಣ ನೆರವು ತಲುಪಿಸುವಂತೆ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ. ಸರ್ಕಾರ ಘೋಷಿಸಿರುವ ತಲಾ ₹5,000 ಬರ ಪರಿಹಾರ (Drought Relief) ಮೊತ್ತವನ್ನು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವಿಳಂಬವಿಲ್ಲದೆ ಜಮೆ ಮಾಡಬೇಕು. ಪರಿಹಾರ ವಿತರಣೆಯಲ್ಲಿ ಹಿಂದೆ ಉಳಿದಿರುವ ಜಿಲ್ಲೆಗಳು ಕೂಡಲೇ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಪರಮೇಶ್ವರ್ ಹೇಳಿದರು.
ಬೇಸಿಗೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಜಿಲ್ಲಾಡಳಿತಗಳ ಜವಾಬ್ದಾರಿಯಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾಗದಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಜಾನುವಾರುಗಳಿಗೆ ಮೇವು ಒದಗಿಸುವುದರ ಜೊತೆಗೆ ರೈತರಿಗೆ ಮೇವಿನ ಬೀಜದ ಕಿಟ್‌ಗಳನ್ನು ವಿತರಿಸಲು ಆದ್ಯತೆ ನೀಡಬೇಕು. ಈ ಸಂಬಂಧ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ನೀಡುವಂತೆ ಬಂದಿರುವ ಪ್ರಸ್ತಾವನೆಯನ್ನೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದ ಯೋಜನೆಗಳು ಕೇವಲ ಕಡತಗಳಲ್ಲಿ ಉಳಿಯಬಾರದು, ಅವುಗಳ ಪ್ರಯೋಜನ ಜನರಿಗೆ ನೇರವಾಗಿ ತಲುಪಬೇಕು ಎಂಬುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಪ್ರತಿಯೊಂದು ಯೋಜನೆಯಲ್ಲೂ ಪಾರದರ್ಶಕತೆ ಮತ್ತು ಜವಾಬ್ದಾರಿ ಇರಬೇಕು. ಅಧಿಕಾರಿಗಳು ನಿಗದಿತ ಸಮಯದೊಳಗೆ ಗುರಿ ತಲುಪುವಂತೆ ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಜನರ ಹಿತಕ್ಕಾಗಿ ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸುವುದು ಹಾಗೂ ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಇಂದು ವಿಕಾಸಸೌಧದಲ್ಲಿ ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದೆ.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪರಿಹಾರ ವಿತರಣೆಯಲ್ಲಿ ಯಾವುದೇ ವಿಳಂಬವಾಗಬಾರದು. ಅರ್ಹ ಪ್ರತಿ ರೈತರಿಗೆ ಸರ್ಕಾರ ಘೋಷಿಸಿರುವ ₹5,000 ಬರ ಪರಿಹಾರವನ್ನು ತ್ವರಿತವಾಗಿ ಅವರ ಖಾತೆಗಳಿಗೆ ಜಮೆ ಮಾಡಬೇಕು. ಪರಿಹಾರ ವಿತರಣೆಯಲ್ಲಿ ಹಿಂದುಳಿದಿರುವ ಜಿಲ್ಲೆಗಳು ಕೂಡಲೇ ಕ್ರಮ ಕೈಗೊಂಡು, ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಬರ ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಅಗತ್ಯ ಮೇವಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ರೈತರಿಗೆ ಮೇವಿನ ಬೀಜದ ಕಿಟ್ಗಳ ವಿತರಣೆಗೆ ಆದ್ಯತೆ ನೀಡಬೇಕು. ಈ ಉದ್ದೇಶಕ್ಕಾಗಿ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಸಲ್ಲಿಕೆಯಾಗಿರುವ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
ಬಡವರಿಗೆ ಸ್ವಂತ ನಿವೇಶನ ಒದಗಿಸುವ ಉದ್ದೇಶದಿಂದ ರೂಪಿಸಿರುವ 15 ಲಕ್ಷ ನಿವೇಶನಗಳ ಯೋಜನೆಯನ್ನು ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸಬೇಕು. ಈಗಾಗಲೇ ಸುಮಾರು 24 ಸಾವಿರ ಎಕರೆ ಸರ್ಕಾರಿ ಜಮೀನನ್ನು ಗುರುತಿಸಲಾಗಿದ್ದು, ಅರ್ಹ ಫಲಾನುಭವಿಗಳನ್ನು ಗುರುತಿಸುವುದು ಹಾಗೂ ನಿವೇಶನಗಳ ಅಭಿವೃದ್ಧಿ ಮತ್ತು ಹಂಚಿಕೆ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚಿಸಿದೆ.
ಅದೇ ರೀತಿ, ಪಿಂಚಣಿ ಸೌಲಭ್ಯಕ್ಕೆ ಒಳಪಡದ ಸುಮಾರು 23 ಲಕ್ಷ ಜನರನ್ನು ಗುರುತಿಸಲಾಗಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳ ಅರ್ಹತೆಯನ್ನು ಸಮಗ್ರವಾಗಿ ಪರಿಶೀಲಿಸಬೇಕು. ಪಿಂಚಣಿಗೆ ಅರ್ಹರಾದವರು ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅನರ್ಹರಿಗೆ ಸೌಲಭ್ಯ ದೊರೆಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ನಿಜವಾದ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು.
ಸರ್ಕಾರದ ಪ್ರತಿಯೊಂದು ಯೋಜನೆಯ ಅನುಷ್ಠಾನದಲ್ಲಿಯೂ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆ ಇರಬೇಕು. ಅಧಿಕಾರಿಗಳು ಕೇವಲ ಪ್ರಗತಿ ವರದಿಗಳನ್ನು ಸಲ್ಲಿಸುವುದಕ್ಕೆ ಸೀಮಿತವಾಗದೆ, ಜನರಿಗೆ ಯೋಜನೆಗಳ ನೈಜ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನಿಗದಿತ ಕಾಲಮಿತಿಯೊಳಗೆ ಗುರಿ ಸಾಧಿಸುವ ಮೂಲಕ ಆಡಳಿತ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸಾಬೀತುಪಡಿಸಬೇಕು ಎಂದು ಸೂಚಿಸಿದೆ.
Making administration more responsive and ensuring that Government schemes reach eligible beneficiaries on time remain our key priorities. With this objective, I reviewed the progress of the Revenue and Youth Empowerment & Sports Departments at Vikasa Soudha today and issued necessary directions to all Deputy Commissioners and Assistant Commissioners.
Farmers are facing severe hardship due to drought, and there should be no delay in relief distribution. I have directed officials to ensure that the ₹5,000 drought relief announced for every eligible farmer is credited at the earliest, particularly in districts where disbursement is still pending.
Officials have also been instructed to prevent drinking water shortages, ensure adequate fodder for livestock and prioritise distribution of fodder seed kits. A proposal seeking an additional ₹30 crore for this purpose is under consideration.
The 15 lakh housing sites programme for the poor must also be expedited. Around 24,000 acres of Government land have already been identified, and officials have been asked to speed up beneficiary identification, site development and allotment.
Similarly, around 23 lakh pension cases are being verified to ensure that no eligible beneficiary is left out and no ineligible person receives the benefit.
Every Government programme must be implemented with transparency, speed and accountability. What matters is not merely progress reports, but whether the benefits actually reach the people.
— Dr. G Parameshwara (@DrParameshwara) November 20, 2026





