ಕರ್ನಾಟಕ ಹವಾಮಾನ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆ!
Karnataka Weather: ಸೆಪ್ಟೆಂಬರ್ 7 ಮತ್ತು 8ರಂದು ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಗಾಳಿಯ ಅಬ್ಬರ ಇರಲಿದೆ.

ಬೆಂಗಳೂರು (Bengaluru): ಕರ್ನಾಟಕದಲ್ಲಿ (Karnataka Weather) ನೈಋತ್ಯ ಮುಂಗಾರು (Southwest Monsoon) ದುರ್ಬಲವಾಗಿದ್ದರೂ, ರಾಜ್ಯದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ (Rain Alert) ಸಾಧ್ಯತೆ ಮುಂದುವರಿದಿದೆ. ಸೆಪ್ಟೆಂಬರ್ 7 ಮತ್ತು 8ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಭಾನುವಾರ ಸಂಜೆವರೆಗೆ ದಾಖಲಾಗಿರುವ ಮಾಹಿತಿಯಂತೆ, ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ 3 ಸೆಂ.ಮೀ ಮಳೆ ದಾಖಲಾಗಿದ್ದರೆ, ಹುಣಸಗಿ, ಗದಗ ಮತ್ತು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ಸೆಪ್ಟೆಂಬರ್ 7ರಂದು ಕರಾವಳಿ ಕರ್ನಾಟಕದ (Coastal Karnataka) ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಮುನ್ಸೂಚನೆ ಇದೆ. ಹೀಗಾಗಿ ಈ ಭಾಗಗಳ ಜನರು ಹವಾಮಾನ ಬದಲಾವಣೆಯ ಬಗ್ಗೆ ಎಚ್ಚರಿಕೆ ವಹಿಸುವುದು ಸೂಕ್ತ.
ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ (Mysuru) ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.
ಸೆಪ್ಟೆಂಬರ್ 8ರಂದು ಕೂಡ ಕರಾವಳಿ ಭಾಗದಲ್ಲಿ ಮಳೆಯ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.
ಕಳೆದ 24 ಗಂಟೆಗಳ ಮಳೆ ಪ್ರಮಾಣ ಗಮನಿಸಿದರೆ, ಚನ್ನರಾಯಪಟ್ಟಣದಲ್ಲಿ 4 ಸೆಂ.ಮೀ, ಕಕ್ಕೇರಿಯಲ್ಲಿ 3 ಸೆಂ.ಮೀ ಮಳೆ ದಾಖಲಾಗಿದೆ. ಹುಣಸಗಿ, ಗದಗ ಪಿಬಿಒ ಅಬ್ಸರ್ವೇಟರಿ ಮತ್ತು ತೀರ್ಥಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.



