ಕರ್ನಾಟಕ ಹವಾಮಾನ: ಅ.9ರಂದು ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಮಿಂಚು, ಗುಡುಗು ಸಹಿತ ಮಳೆ
Karnataka Weather: ಅಕ್ಟೋಬರ್ 8ರಂದು ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿಯ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು (Bengaluru): ಕರ್ನಾಟಕದಲ್ಲಿ ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ (Karnataka Weather) ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 8ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡದಲ್ಲಿ ಕೆಲವೆಡೆ ಸಾಧಾರಣ ಮಳೆಯಾಗಬಹುದು (Rain Alert). ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.
ಇದನ್ನೂ ಓದಿ: ಮಳೆ ಕೊರತೆ, ಇಳುವರಿ ಕುಸಿತ! ಸತತ 4 ತಿಂಗಳಲ್ಲಿ 4ನೇ ಬಾರಿ ಅಕ್ಕಿ ದರ ಏರಿಕೆ
ಅಕ್ಟೋಬರ್ 9ರಂದು ಆರು ಜಿಲ್ಲೆಗಳಲ್ಲಿ ಭಾರಿ ಮಳೆ
ಅಕ್ಟೋಬರ್ 9ರಂದು ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯ (Heavy Rain) ಸಾಧ್ಯತೆ ಇದೆ. ಮೈಸೂರು (Mysuru), ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಬಹುದು.
ಇದರೊಂದಿಗೆ ತುಮಕೂರು, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಕೋಲಾರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ, ಶೇ.90ರಷ್ಟು ಬೆಳೆ ಹಾನಿ! 2,500 ರೂಪಾಯಿ ಮೊದಲ ಕಂತಿನ ಪರಿಹಾರ ಬಿಡುಗಡೆಗೆ ಕ್ರಮ
ಕರಾವಳಿಯಲ್ಲೂ ಮಳೆ ಸಾಧ್ಯತೆ
ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಒಣಹವೆಯೇ ಮುಂದುವರಿಯಲಿದೆ.
ಇತ್ತೀಚಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಯಾವುದೇ ಭಾಗದಲ್ಲೂ ಭಾರಿ ಮಳೆ ದಾಖಲಾಗಿಲ್ಲ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ (Napoklu) 4 ಸೆಂ.ಮೀ ಮತ್ತು ಚಾಮರಾಜನಗರ ಜಿಲ್ಲೆಯ ಬೇಗೂರಿನಲ್ಲಿ 3 ಸೆಂ.ಮೀ ಮಳೆ ದಾಖಲಾಗಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.
ಕರ್ನಾಟಕ ಹವಾಮಾನ: ಬೆಂಗಳೂರು, ಹಾಸನ, ಮೈಸೂರು ಸೇರಿ ಈ 8 ಜಿಲ್ಲೆಗಳಲ್ಲಿ ಮಳೆ, ಗಾಳಿಯ ಅಬ್ಬರ
Read the story
ದಿನ ಭವಿಷ್ಯ 28 ಅಕ್ಟೋಬರ್ 2026, ಬುಧವಾರ
Read the story
ಬೆಂಗಳೂರು: ಉಚಿತ ಅಣಬೆ ಕೃಷಿ ತರಬೇತಿಗೆ ಅರ್ಜಿ ಆಹ್ವಾನ! ಮನೆಯಲ್ಲೇ ಸ್ವಂತ ಉದ್ಯಮ ಶುರು ಮಾಡಿ
Read the story
ಬೆಂಗಳೂರು ಮೆಟ್ರೋ ಜಾಲ, ಹೊಸಕೋಟೆ, ತುಮಕೂರಿಗೂ ವಿಸ್ತರಣೆ! ಈ ಭಾಗದ ಭೂಮಿಗೆ ಬಂಗಾರದ ಬೆಲೆ
Read the story
ಇಳುವರಿ ಕುಸಿತ, ಮಾರುಕಟ್ಟೆಗೆ ಪೂರೈಕೆ ಕಡಿಮೆ! ಈರುಳ್ಳಿ ಬೆಲೆ ಭಾರೀ ಏರಿಕೆ
Read the story




