ಕರ್ನಾಟಕ ಜನರೇ, ಮಳೆ ಮತ್ತೆ ಜೋರು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ
Karnataka Weather: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ, ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ ಇದೆ.

ಬೆಂಗಳೂರು (Bengaluru), ಅಕ್ಟೋಬರ್ 5: ಕರ್ನಾಟಕ ರಾಜ್ಯದಲ್ಲಿ ಮುಂಗಾರು (Karnataka Monsoon) ಮತ್ತೆ ಚುರುಕಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ (Heavy Rain) ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಕೆಲವೆಡೆ ಗುಡುಗು ಮತ್ತು ಸಿಡಿಲಿನೊಂದಿಗೆ ಭಾರಿ ಮಳೆಯಾಗಬಹುದು.
ವಿಶೇಷವಾಗಿ ದಕ್ಷಿಣ ಕನ್ನಡ (Dakshina Kannada), ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಕರಾವಳಿ ಭಾಗದ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲಿನೊಂದಿಗೆ ಮಳೆಯಾಗುವ ಸಾಧ್ಯತೆಯೂ ಇದೆ.
ಇದನ್ನೂ ಓದಿ: ಕರ್ನಾಟಕ ಪಶು ಆಧಾರ್ ಯೋಜನೆ: ರೈತರೇ, ನಿಮ್ಮ ಜಾನುವಾರುಗಳಿಗೆ ಡಿಜಿಟಲ್ ಐಡಿ ಕಾರ್ಡ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಕಡೆ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಪ್ರದೇಶಗಳಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ಭಾಗದಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ವಿಜಯನಗರ, ದಾವಣಗೆರೆ, ಬಳ್ಳಾರಿ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಬಹುದು. ರಾಜಧಾನಿ ಬೆಂಗಳೂರಿನಲ್ಲೂ (Bengaluru Rain) ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆಯಿದೆ.
ಇದನ್ನೂ ಓದಿ: ಹೊಸ ಬಿಪಿಎಲ್ ರೇಷನ್ ಕಾರ್ಡ್ ಮಾಡಿಸೋಕೆ ಕಾಯ್ತಾ ಇದ್ದೋರಿಗೆ ಭರ್ಜರಿ ಗುಡ್ ನ್ಯೂಸ್
ಉತ್ತರ ಒಳನಾಡಿನಲ್ಲಿ ಮಳೆಯ ಚಿತ್ರಣ ವಿಭಿನ್ನವಾಗಿರಲಿದೆ. ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದರೂ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಬೆಳಗಾವಿ, ವಿಜಯಪುರ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಒಣ ಹವೆ (Dry Weather) ಮುಂದುವರಿಯುವ ನಿರೀಕ್ಷೆಯಿದೆ.
ನಾಳೆಯೂ ಇದೇ ರೀತಿಯ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಭಾರಿ ಮಳೆಯಾಗಬಹುದು.
ಇದನ್ನೂ ಓದಿ: ಗೃಹಜ್ಯೋತಿ ಯೋಜನೆ: 34.76 ಲಕ್ಷ ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಸ್ಥಗಿತ! ಇಲ್ಲಿದೆ ಕಾರಣ
ಉತ್ತರ ಕನ್ನಡದಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಮತ್ತು ಶಿವಮೊಗ್ಗದ ಕೆಲವೆಡೆ ಮಳೆ ಹೆಚ್ಚಾಗುವ ಮುನ್ಸೂಚನೆ ಇದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.






