Karnataka Weather: ಕರ್ನಾಟಕ ಹವಾಮಾನ; ಮಳೆ ಇಲ್ಲ! ಬೆಂಗಳೂರು ಭಾಗದಲ್ಲಿ ಬೆಳಿಗ್ಗೆ ಮಂಜು, ರಾತ್ರಿ ಚಳಿ
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಶುಷ್ಕ ವಾತಾವರಣ ಮುಂದುವರಿಯಲಿದೆ, ಚಳಿ ಮತ್ತು ಮಂಜು ಹೆಚ್ಚುವ ಸಾಧ್ಯತೆ ಇದ್ದು ಸಾರ್ವಜನಿಕರು ಆರೋಗ್ಯದ ಬಗ್ಗೆ ಎಚ್ಚರ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ
- ಕರ್ನಾಟಕ ಹವಾಮಾನ ವರದಿ ಪ್ರಕಾರ ಶುಷ್ಕ ವಾತಾವರಣ
- ಬೆಂಗಳೂರು ನಗರದಲ್ಲಿ ಮಂಜು ಮತ್ತು ಚಳಿ ತೀವ್ರತೆ
- ಶುಷ್ಕ ವಾತಾವರಣ ಹಿನ್ನೆಲೆ ಆರೋಗ್ಯ ಎಚ್ಚರಿಕೆ
Karnataka Weather: ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಆವರಿಸಿಕೊಂಡಿದ್ದು, ಇದೇ ಸ್ಥಿತಿ ಇನ್ನೂ ಕೆಲವು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಯಾವುದೇ ಸೂಚನೆ (Rain Update) ಇಲ್ಲದ ಕಾರಣ, ಚಳಿ ಹೆಚ್ಚಾಗಿ ಅನುಭವವಾಗುತ್ತಿದೆ.
ಬೆಂಗಳೂರು ನಗರದಲ್ಲಿ ಮಂಜು ಮತ್ತು ಚಳಿ
ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ ಮಂಜು (Dense Fog) ಕವಿದ ವಾತಾವರಣ ಕಂಡುಬರುತ್ತಿದೆ. ಕನಿಷ್ಠ ತಾಪಮಾನ ಸುಮಾರು 15 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 30 ಡಿಗ್ರಿಯ ಸುತ್ತಮುತ್ತ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಯಾವ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ?
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು ಸೇರಿದಂತೆ ಹಲವೆಡೆ ಒಣ ಹವೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಗದಗ, ಧಾರವಾಡ ಹಾಗೂ ರಾಯಚೂರಿನಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲೂ ಮಳೆಯಿಲ್ಲದೆ ಒಣ ಹವೆ ಮುಂದುವರಿಯಲಿದೆ.
ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ
ತೀವ್ರ ಚಳಿ (Cold Wave) ಮತ್ತು ಒಣ ಹವೆಯಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಬೆಚ್ಚನೆಯ ಉಡುಪು ಧರಿಸುವುದು, ಬಿಸಿ ಆಹಾರ ಸೇವನೆ ಮತ್ತು ಸಮತೋಲನ ಆಹಾರಕ್ಕೆ ಆದ್ಯತೆ ನೀಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.



