10ನೇ ತರಗತಿ ಪಾಸಾಗಿದ್ರೆ ಸಾಕು! ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ 39 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಅರ್ಹತೆಯ ಅಭ್ಯರ್ಥಿಗಳು ಅಕ್ಟೋಬರ್ 3ರೊಳಗೆ ಅರ್ಜಿ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆಯಬಹುದು.

Kodagu District Court Recruitment 2026: ಕೊಡಗು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ (Kodagu District Court) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅಕ್ಟೋಬರ್ 3ರೊಳಗೆ ಅರ್ಜಿ ಸಲ್ಲಿಸಬೇಕಿದೆ.

ಈ ನೇಮಕಾತಿಯಲ್ಲಿ ಟೈಪಿಸ್ಟ್, ಚಾಲಕ, ಪ್ರೊಸೆಸ್ ಸರ್ವರ್ ಹಾಗೂ ಪಿಯೋನ್/ಅಟೆಂಡರ್ ಹುದ್ದೆಗಳು ಸೇರಿವೆ. ಒಟ್ಟು 39 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಹುದ್ದೆಗೆ ಅನುಗುಣವಾಗಿ ವೇತನ ಶ್ರೇಣಿ ಕೂಡ ಬದಲಾಗಲಿದೆ.

ಯಾವ ಹುದ್ದೆಗಳಿಗೆ ಎಷ್ಟು ವೇತನ?

ಒಟ್ಟು 8 ಟೈಪಿಸ್ಟ್ ಹುದ್ದೆಗಳು ಖಾಲಿಯಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ₹34,100ರಿಂದ ₹67,600ರವರೆಗೆ ವೇತನ ಸಿಗಲಿದೆ. 2 ಚಾಲಕ ಹುದ್ದೆಗಳಿಗೂ ಇದೇ ವೇತನ ಶ್ರೇಣಿ ಅನ್ವಯವಾಗಲಿದೆ.

ಇನ್ನು 6 ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ₹31,775ರಿಂದ ₹61,300ರವರೆಗೆ ಹಾಗೂ 23 ಪಿಯೋನ್/ಅಟೆಂಡರ್ ಹುದ್ದೆಗಳಿಗೆ ₹27,000ರಿಂದ ₹46,675ರವರೆಗೆ ಮಾಸಿಕ ವೇತನ ನಿಗದಿಯಾಗಿದೆ.

10ನೇ ತರಗತಿ ಪಾಸಾದವರಿಗೂ ಅವಕಾಶ

ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪಿಯುಸಿ ಅಥವಾ ಡಿಪ್ಲೊಮಾ (Diploma) ವಿದ್ಯಾರ್ಹತೆ ಹೊಂದಿರಬೇಕು. ಚಾಲಕ, ಪ್ರೊಸೆಸ್ ಸರ್ವರ್ ಮತ್ತು ಪಿಯೋನ್/ಅಟೆಂಡರ್ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿದ್ದರೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷವಾಗಿರಬೇಕು. ಗರಿಷ್ಠ ವಯೋಮಿತಿ 40 ವರ್ಷಕ್ಕೆ ನಿಗದಿಪಡಿಸಲಾಗಿದೆ. ನಿಯಮಾನುಸಾರ ಎಸ್‌ಸಿ, ಎಸ್‌ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು 2A, 2B, 3A, 3B ಪ್ರವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಸಿಗಲಿದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹300 ಅರ್ಜಿ ಶುಲ್ಕ (Application Fee) ನಿಗದಿಯಾಗಿದೆ. 2A, 2B, 3A ಮತ್ತು 3B ಪ್ರವರ್ಗಕ್ಕೆ ಸೇರಿದ ಅಭ್ಯರ್ಥಿಗಳು ₹150 ಶುಲ್ಕ ಪಾವತಿಸಬೇಕು.

ಅಭ್ಯರ್ಥಿಗಳು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಬಹುದು.

ಆಯ್ಕೆ ಹೇಗೆ ನಡೆಯಲಿದೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಹುದ್ದೆಗೆ ಅನುಗುಣವಾಗಿ ವಿವಿಧ ಹಂತಗಳಲ್ಲಿ ನಡೆಸಲಾಗುತ್ತದೆ. ಟೈಪಿಸ್ಟ್ ಹುದ್ದೆಗೆ ಕಂಪ್ಯೂಟರ್ ಟೈಪಿಂಗ್ ಕೌಶಲ್ಯ ಪರೀಕ್ಷೆ (Typing Test), ಚಾಲಕ ಹುದ್ದೆಗೆ ಡ್ರೈವಿಂಗ್ ಟೆಸ್ಟ್ (Driving Test) ಸೇರಿದಂತೆ ಅಗತ್ಯ ಪರೀಕ್ಷೆಗಳು ಇರಲಿವೆ. ಜೊತೆಗೆ ಸಂದರ್ಶನದ (Interview) ಮೂಲಕವೂ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಹತೆ, ವಯೋಮಿತಿ ಹಾಗೂ ಇತರ ನಿಯಮಗಳನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ. ಬಳಿಕ ಶೈಕ್ಷಣಿಕ ದಾಖಲೆಗಳು, ಫೋಟೋ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ ದೊರೆಯುವ ಅಪ್ಲಿಕೇಶನ್ ಸಂಖ್ಯೆಯನ್ನು (Application Number) ಭವಿಷ್ಯದ ಬಳಕೆಗಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಉತ್ತಮ. ಅಕ್ಟೋಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುವುದರಿಂದ ಕೊನೆಯ ಕ್ಷಣದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಸೂಕ್ತ.

English Summary

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories