ಕೋಲಾರ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

District tour of the Minister in charge of Kolar District

🌐 Kannada News :

ಕನ್ನಡ ನ್ಯೂಸ್ ಟುಡೇKolar News

ಕೋಲಾರ : ಅಬಕಾರಿ ಮತ್ತು ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್ ನಾಗೇಶ್ ಅವರು ಜ. 19 ಮತ್ತು 20 ರಂದು ಕೋಲಾರ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ.

ಜ. 19 ರಂದು ಬೆಳಿಗ್ಗೆ 11.30 ಮುಳಬಾಗಿಲು ತಾಲ್ಲೂಕಿನ ಗಡಿ ಕನ್ನಡ ಭವನದಲ್ಲಿ ರೆಡ್ಡಿ ಜನ ಸಂಘದ ವತಿಯಿಂದ ಏರ್ಪಡಿಸಿರುವ ಶ್ರೀ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಜ. 20 ರಂದು ಮಧ್ಯಾಹ್ನ 01.00 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರ ಕಛೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಮತ್ತು ಅಹವಾಲು ಸ್ವೀಕಾರ ಸಭೆ ನಡೆಸುವರು ನಂತರ ಮಧ್ಯಾಹ್ನ 3.30 ಗಂಟೆಗೆ ಮುಳಬಾಗಿಲು ಶಾಸಕರ ಕಛೇರಿಯಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಮತ್ತು ಅಹವಾಲು ಸ್ವೀಕಾರ ಸಭೆ ನಡೆಸುವರು ಎಂದು ಅವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.////

Quick Links : Kolar News Kannada


📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.

Contact for web design services Mobile