ಇಲಾಖೆಯ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸಚಿವ ನಾಗೇಶ್ ಕರೆ
Minister Nagesh calls for the use of departmental plans
ಕನ್ನಡ ನ್ಯೂಸ್ ಟುಡೇ – Kolar News
ಕೋಲಾರ : ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಇಲಾಖೆಯ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಬಕಾರಿ ಮತ್ತು ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್ ನಾಗೇಶ್ ಅವರು ಹೇಳಿದರು.
ಇಂದು ಮುಳಬಾಗಿಲಿನ ಗಡಿನಾಡ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಲಾರ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹತ್ತು ಜನ ಸ್ತ್ರೀಯರಿದ್ದರೆ ಒಂದು ಸ್ವ ಸಹಾಯ ಸಂಘವನ್ನು ಸ್ಥಾಪಿಸಿಕೊಂಡು ಇಲಾಖೆಯಿಂದ ಸಿಗುವಂತಹ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಮಹಿಳೆಯರು ಸಾಲ ತೀರಿಸುವ ಜವಾಬ್ದಾರಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಡಿ.ಸಿ.ಸಿ ಬ್ಯಾಂಕ್‍ನಿಂದ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲವನ್ನು ನೀಡುತ್ತಿದ್ದು, ಅದನ್ನು ಬಳಸಿಕೊಂಡು ಉದ್ಯಮಶೀಲತೆಯಡಿ ಕುರಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಮತ್ತು ಹಸು ಸಾಕಾಣಿಕೆ, ಮಿನಿ ಡೈರಿ ಹೀಗೆ ವಿವಿಧ ರೀತಿಯ ಸ್ವಯಂ ಉದ್ಯೋಗಗಳನ್ನು ರೂಪಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್ ಅವರು ಮಾತನಾಡಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸಮಾವೇಶದಲ್ಲಿ ಭಾಗವಹಿಸಿರುವುದು ಸಂತೋಷವಾಗುತ್ತಿದೆ. ಈ ಸ್ವ ಸಹಾಯ ಸಂಘಗಳಿಗೆ ಸಂಬಂಧಿಸಿದ ಯಾವುದೇ ನ್ಯೂನ್ಯತೆಗಳಿದ್ದರೆ ತಿಳಿಸಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ನಿಂದ ಸಿಗಬೇಕಾದ ಸವಲತ್ತುಗಳನ್ನು ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಂ.ಜಿ ಪಾಲಿ, ಮುಳಬಾಗಿಲು ತಾಲ್ಲೂಕು ಪಂಚಾಯತಿ ಅಧ್ಯಕ್ಷರಾದ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿಷಯ ನಿರ್ವಹಾಕ ವಿಶ್ವನಾಥ್ ಸೇರಿದಂತೆ ಜಿಲ್ಲೆಯ ವಿವಿಧ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Web Title : Minister Nagesh calls for the use of departmental plans
ಕನ್ನಡ ನ್ಯೂಸ್ ನವೀಕರಣಗಳಿಗಾಗಿ ನಮ್ಮ Facebook | Twitter । YouTube News Channel ಅನುಸರಿಸಿ. Latest News ಜೊತೆಗೆ Breaking News ನೀವಿರುವಲ್ಲಿಯೇ ಪಡೆಯಿರಿ.
Follow us On
Google News |