ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರವು (Congress government) ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡಲು ಮುಂದಾಗಿದೆ.
ಈಗಾಗಲೇ ರಾಜ್ಯದ ಜನರು ನಾಲ್ಕು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಇದರ ಜೊತೆ ಇನ್ನು ಹಲವಾರು ಯೋಜನೆಗಳನ್ನು ಜಾರಿಗೆ ತರಲು ರಾಜ್ಯ ಸರ್ಕಾರವು ಮುಂದಾಗಿದೆ.
ಪ್ರತಿ ಬಾರಿಯು ನಡೆಯುವ ರಾಜ್ಯ ಸಂಪುಟ ಸಭೆಯಲ್ಲಿ ಜನಸಮಾನ್ಯರು ಹಾಗೂ ರೈತರಿಗಾಗಿ ಯೋಜನೆ ಘೋಷಣೆ ಮಾಡುತ್ತಿದೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದ ರೈತರಿಗಾಗಿ ಹೊಸ ಯೋಜನೆ ಘೋಷಣೆ ಮಾಡಿದೆ. ಈ ಮೂಲಕ ಬರದ ಸಂಕಷ್ಟದಲ್ಲಿರುವ ರೈತರ ಮೊಗದಲ್ಲಿ ಮಂದಹಾಸ ಮೂಡಿಸಲು ಮುಂದಾಗಿದೆ.
ಮನೆ ಬಾಡಿಗೆಗಳು 30% ರಷ್ಟು ಹೆಚ್ಚಳ, ಅಗ್ರಸ್ಥಾನದಲ್ಲಿ ಬೆಂಗಳೂರು! ಇಲ್ಲಿದೆ ಸಂಶೋಧನಾ ಡೇಟಾ
ಇನ್ಮುಂದೆ ರೈತರಿಗೆ ಈ ಎಲ್ಲ ಸೌಲಭ್ಯಗಳು ಉಚಿತ:
ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆ (krishi Bhagya Yojana) ಮರು ಜಾರಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಇದರಿಂದ ಕೃಷಿ ಹೊಂಡವನ್ನು ಉಚಿತವಾಗಿ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ.
ಈ ವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಇಲಾಖೆಗೆ (Agriculture department) ಸಂಬಂಧಿಸಿದಂತೆ 2023-24 ನೇ ಸಾಲಿನಲ್ಲಿ 106 ತಾಲೂಕುಗಳಿಗೆ 1೦೦ ಕೋಟಿ ರೂ. ಅನುದಾನದಲ್ಲಿ ಕೃಷಿ ಭಾಗ್ಯ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಮಹಿಳೆಯರಿಗೆ ಸಿಗಲಿದೆ 2.5 ಲಕ್ಷ ಸಾಲ ಸೌಲಭ್ಯ! ಮೈಕ್ರೋ ಕ್ರೆಡಿಟ್ ಯೋಜನೆಗೆ ಅರ್ಜಿ ಸಲ್ಲಿಸಿ
ರೈತರಿಗಾಗಿ ಕೃಷಿ ಭಾಗ್ಯ ಯೋಜನೆ
ಮಳೆ ಆಧರಿತ ಕೃಷಿಯನ್ನು ಸುಸ್ಥಿರ ಕೃಷಿಯಾಗಿ ಪರಿವರ್ತಿಸುವ ಉದ್ದೇಶದಿಂದ ರಾಜ್ಯ ಸರ್ಕಾರ (state government) ರೈತರಿಗಾಗಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಿದೆ. ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಈ ಯೋಜನೆ ಜಾರಿ ಮಾಡಲಾಗಿತ್ತು.
ನಂತರ ಬಿಜೆಪಿ (BJP) ಅಧಿಕಾರಕ್ಕೆ ಬಂದ ವೇಳೆ ಈ ಯೋಜನೆ ಸ್ಥಗಿತಗೊಂಡಿತ್ತು. ಈ ಯೋಜನೆ ಸಾಕಷ್ಟು ಮಳೆ ನೀರು ಕೊಯ್ಲು, ಮತ್ತು ಪ್ರಯೋಜನಕಾರಿ ಬಳಕೆಯ ಮೂಲಕ ಉತ್ಪಾದನೆ ಹೆಚ್ಚಿಸಲು ಸಹಾಯವಾಗಲಿದೆ.
ಬಿಪಿಎಲ್, ಎಪಿಎಲ್ ಕಾರ್ಡ್ ಇರೋರಿಗೆ ಸಿಹಿ ಸುದ್ದಿ! ಸಿಗಲಿದೆ ಮತ್ತೊಂದು ಯೋಜನೆ ಬೆನಿಫಿಟ್
ಸಬ್ಸಿಡಿ ದರದಲ್ಲಿ ಸಿಗಲಿದೆ ಸಾಲ ಸೌಲಭ್ಯ: (subsidy loan)
ಮಳೆ ನೀರು ವ್ಯರ್ಥವಾಗುವುದನ್ನು ತಡೆಯಲು ಮತ್ತು ರಕ್ಷಣಾತ್ಮಕ ನೀರಾವರಿ ಒದಗಿಸಲು ಆಯ್ದ ಸ್ಥಳದಲ್ಲಿ ಕೃಷಿ ಬಾವಿ ನಿರ್ಮಾಣ ಮಾಡಲಾಗುತ್ತದೆ. ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಬ್ಸಿಡಿ ಸಾಲ (Subsidy Loan) ಸೌಲಭ್ಯ ನೀಡಲಾಗುತ್ತದೆ.
ಇದರಲ್ಲಿ ಸಾಮಾನ್ಯ ವರ್ಗದವರು ಕೃಷಿ ಹೊಂಡ ನಿರ್ಮಾಣ ಮಾಡಲು ಶೇ.8೦ ರಷ್ಟು ಸಬ್ಸಿಡಿ, ಹಾಗೆಯೇ ಎಸ್ಸಿ, ಎಸ್ಎಸ್ಟಿ ಸಮುದಾಯಕ್ಕೆ ಶೇ.9೦ ರಷ್ಟು ಸಹಾಯಧನ ನೀಡಲಾಗುತ್ತದೆ.
ರೈತರು ಈ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ತಮಗೆ ಬೇಕಾದ ಸ್ಥಳದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡು ಬೆಳೆಗಳಿಗೆ ನೀರು ಪೂರೈಕೆ ಮಾಡಿಕೊಳ್ಳಬಹುದು. ಅಲ್ಲದೆ ಸರ್ಕಾರವೇ ಬೆಂಬಲ ಬೆಲೆಯಲ್ಲಿ ನೀವು ಬೆಳೆದ ಬೆಳೆಗಳನ್ನು ಖರೀದಿ ಮಾಡುವುದರಿಂದ ನಿಮಗೆ ಹೆಚ್ಚಿನ ಲಾಭವೂ ಸಿಗಲಿದೆ.
ಗೃಹಲಕ್ಷ್ಮಿ 3ನೇ ಕಂತಿನ ಹಣ ಈ ದಿನ ಬಿಡುಗಡೆ! ನಿಮ್ಮ ಬ್ಯಾಂಕ್ ಖಾತೆ ಚೆಕ್ ಮಾಡಿಕೊಳ್ಳಿ
Krishi Bhagya for farmers, Diwali gift from the government, these facilities are free
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.