ಮಂಡ್ಯ ಜಿಲ್ಲೆಯಲ್ಲಿ ಭೀಕರ ಅಪಘಾತ, ಮರಕ್ಕೆ ಡಿಕ್ಕಿಯಾದ ಕೆಎಸ್‌ಆರ್‌ಟಿಸಿ ಬಸ್
ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ, 25ಕ್ಕೂ ಹೆಚ್ಚು ಮಂದಿ ಗಾಯ. ಮಂಡ್ಯ ಜಿಲ್ಲೆಯಲ್ಲಿ ಭೀಕರ ಅಪಘಾತ, ಪ್ರಯಾಣಿಕರ ಪರದಾಟ
- ಕೆಎಸ್‌ಆರ್‌ಟಿಸಿ ಬಸ್ ಬಸ್ ಅಪಘಾತ, ಮರಕ್ಕೆ ಡಿಕ್ಕಿ
- ಶಾಲಾ ಮಕ್ಕಳು ಸೇರಿದಂತೆ ಹಲವಾರು ಪ್ರಯಾಣಿಕರಿಗೆ ಗಾಯ
- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲು ಸೂಚನೆ
Mandya Bus Accident : ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಕುಂದನಹಳ್ಳಿ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕೆಎಸ್‌ಆರ್‌ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ತಕ್ಷಣದ ಚಿಕಿತ್ಸಾ ವ್ಯವಸ್ಥೆ:
ಅಪಘಾತದಲ್ಲಿ ತೀವ್ರ ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರಿಗೆ ತಕ್ಷಣ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ನೀಡುವಂತೆ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದ್ದು, ತುರ್ತು ವೈದ್ಯಕೀಯ ಸಹಾಯ ಅಗತ್ಯವಾಗಿದೆ.
ಮೈಸೂರು ಜಿಲ್ಲೆಯಲ್ಲಿ ಆನೆ ದಾಳಿಗೆ 21 ವರ್ಷದ ಯುವಕ ಬಲಿ! ಗ್ರಾಮಸ್ಥರ ಆಕ್ರೋಶ
ಬಸ್ ಹೇಗೆ ಅಪಘಾತಕ್ಕೀಡಾಯಿತು?
ಪ್ರಾಥಮಿಕ ಮಾಹಿತಿಯಂತೆ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು, ಅವರಲ್ಲಿ ಕೆಲವರನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ಸೇರಿಸಲಾಗಿದೆ. ಅಪಘಾತದ ನಂತರ ಸ್ಥಳದಲ್ಲಿ ಭಾರಿ ಜನಸಮೂಹ ಸೇರಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಲಾಗಿದೆ.
ಹೆಜ್ಜೇನು ದಾಳಿ, ಬೆಳೆಗಳಿಗೆ ನೀರು ಹಾಯಿಸಲು ಹೋಗಿದ್ದ ರೈತ ಸಾವು
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಂದನೆ:
ಈ ಭೀಕರ ಘಟನೆ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ಜಿಲ್ಲಾ ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಗಾಯಾಳುಗಳಿಗೆ ತಕ್ಷಣದ ತುರ್ತುಚಿಕಿತ್ಸೆ ನೀಡಲು ಸೂಚಿಸಿದ್ದಾರೆ. ಇನ್ನು, ಎಲ್ಲ ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಾರೈಸಿದ್ದಾರೆ.
KSRTC Bus Accident in Mandya, Over 25 Injured
Our Whatsapp Channel is Live Now 👇