ಕುಂದಾಪುರದಲ್ಲಿ ಎರಡು ಬಸ್‌ಗಳ ನಡುವೆ ಭೀಕರ ಡಿಕ್ಕಿ: 15ಕ್ಕೂ ಹೆಚ್ಚು ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅರಾಟೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಎರಡು ಬಸ್‌ಗಳು ಅಪಘಾತಕ್ಕೀಡಾಗಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ (Kundapura) ತಾಲೂಕಿನ ಅರಾಟೆ ಸೇತುವೆ ಸಮೀಪ ಭಾನುವಾರ ಬೆಳಗ್ಗೆ ಸಂಭವಿಸಿದ ಬಸ್ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಗೆ ಎರಡು ಬಸ್‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೈಂದೂರಿನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಕುಂದಾಪುರದಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಮತ್ತೊಂದು ಬಸ್ ನಡುವೆ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಎರಡೂ ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

ಇದನ್ನೂ ಓದಿ: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಬಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ

ಅಪಘಾತದ ಬಳಿಕ ಗಾಯಾಳುಗಳಿಗೆ ನೆರವಾಗಲು ಸ್ಥಳೀಯರು ತಕ್ಷಣ ಧಾವಿಸಿದರು. ಅವರನ್ನು ಕುಂದಾಪುರದ ಆಸ್ಪತ್ರೆಗೆ ಕರೆದೊಯ್ಯಲು ಟೀಮ್ ಎಂಎಚ್‌ಐ (Team MHI) ಆಪತ್ಬಾಂಧವ ಆಂಬುಲೆನ್ಸ್, ಮಾನವೀಯತೆ ಆಂಬುಲೆನ್ಸ್ ಸಿಬ್ಬಂದಿ ಸಹಕರಿಸಿದರು.

ಇದರ ಜೊತೆಗೆ ಹೆಮ್ಮಾಡಿಯ ರಿಕ್ಷಾ ಚಾಲಕರಾದ ಶರತ್, ಕೃಷ್ಣ ಮತ್ತು ಪ್ರಶಾಂತ್ ಕೂಡ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ಕೈಜೋಡಿಸಿದರು. ಅಪಘಾತದ ನಿಖರ ಕಾರಣ ಹಾಗೂ ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories