ದಾವಣಗೆರೆ: ರಕ್ಷಣೆಗೆ ಬಂದ ಅರಣ್ಯ ಸಿಬ್ಬಂದಿ ಮೇಲೆಯೇ ಎರಗಿದ ಚಿರತೆ! Video ಇಲ್ಲಿದೆ

ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸಿ ಚಿಕಿತ್ಸೆ ನೀಡಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಅದು ಏಕಾಏಕಿ ದಾಳಿ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ.

Leopard Attacks Forest Staff: ದಾವಣಗೆರೆ (Davanagere) ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಾಯಗೊಂಡಿದ್ದ ಚಿರತೆಯನ್ನು ರಕ್ಷಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಮಂಗಳವಾರ (ಸೆ.8) ಬೆಳಗಿನ ಜಾವ ಈ ಘಟನೆ ನಡೆದಿದೆ.

ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಚಿರತೆಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಚಿರತೆಗೆ ಗಂಭೀರ ಗಾಯಗಳಾಗಿದ್ದವು. ಗಾಯಗೊಂಡ ಸ್ಥಿತಿಯಲ್ಲೇ ಅದು ಇಡೀ ರಾತ್ರಿ ರಸ್ತೆ ಬದಿಯಲ್ಲಿ ನರಳುತ್ತಿತ್ತು.

ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪೊಲೀಸರು (National Highway Police) ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಾಹಿತಿ ದೊರೆತ ಬಳಿಕ ಗಾಯಗೊಂಡ ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಚಿಕಿತ್ಸೆ ಕೊಡಿಸಲು ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದರು.

ಹಂಪಿಯಿಂದ (Hampi) ಆಗಮಿಸಿದ್ದ ಪಶುವೈದ್ಯರ ತಂಡದ ಸಹಾಯದೊಂದಿಗೆ ಚಿರತೆಗೆ ಮೊದಲು ಅರಿವಳಿಕೆ ಇಂಜೆಕ್ಷನ್ ನೀಡಿ (Tranquilizer Injection) ರಕ್ಷಿಸುವ ಪ್ರಯತ್ನ ಮಾಡಲಾಯಿತು. ಆದರೆ ಅರಿವಳಿಕೆ ಪರಿಣಾಮ ಬೀರುವ ಮುನ್ನವೇ ಚಿರತೆ ಏಕಾಏಕಿ ಅರಣ್ಯ ಸಿಬ್ಬಂದಿಯತ್ತ ಎರಗಿ ದಾಳಿ ನಡೆಸಿದೆ.

ದಾಳಿಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಎರಡನೇ ಬಾರಿ ಅರಿವಳಿಕೆ ನೀಡಿದ ನಂತರ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಯಿತು.

ನಂತರ ಗಾಯಗೊಂಡ ಚಿರತೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಅಪಘಾತದಿಂದ ಗಾಯಗೊಂಡಿದ್ದ ಪ್ರಾಣಿಯನ್ನು ರಕ್ಷಿಸುವ ವೇಳೆ ನಡೆದ ಈ ದಾಳಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಿಸಿತು.

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories