ಮಾಗಡಿಯಲ್ಲಿ ಮತ್ತೆ ಚಿರತೆ ಆತಂಕ: ಸಿಸಿಟಿವಿಯಲ್ಲಿ ಓಡಾಟ ಸೆರೆ
Leopard Spotted: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ತೋಟದ ಮನೆಯ ಗೇಟ್ ಒಳಗೆ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಅರಣ್ಯ ಇಲಾಖೆಯ ತಕ್ಷಣದ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Leopard Spotted: ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಹುಷಾರಾಣಿ ಎಂಬುವವರಿಗೆ ಸೇರಿದ ತೋಟದ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಗೇಟ್ ಒಳಗೆ ಓಡಾಡುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ದಾಖಲಾಗಿವೆ.
ಕೆಲವು ದಿನಗಳ ಹಿಂದಷ್ಟೇ ಕಲ್ದೇವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ರೈತರೊಬ್ಬರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಭಯ ಹೆಚ್ಚಿಸಿದೆ.
ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಯಾವಾಗ ಅವಕಾಶ? ದಿನಾಂಕ ಪ್ರಕಟ, ಇಲ್ಲಿದೆ ಸಂಪೂರ್ಣ ಮಾಹಿತಿ
ರಾತ್ರಿ ವೇಳೆ ಹೊರಗೆ ಓಡಾಡಲು ಗ್ರಾಮಸ್ಥರು ಹಿಂದೇಟು ಹಾಕುತ್ತಿದ್ದು, ಜಾನುವಾರು ಮತ್ತು ಸಾಕುಪ್ರಾಣಿಗಳ ಸುರಕ್ಷತೆಯ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ, ಯಾವುದೇ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



