ಉಚಿತ ಅಕ್ಕಿ, ಗೃಹಲಕ್ಷ್ಮಿ ಹಣ ಪಡೆಯೋಕೆ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಲಿಂಕ್ ಮಾಡಿ!
ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ವಿಧಾನ
ಇಂದು ಬ್ಯಾಂಕ್ ಖಾತೆ (bank account) ಯಿಂದ ಹಿಡಿದು ನೀವು ಇತರ ಯಾವುದೇ ಹಣಕಾಸಿನ ವ್ಯವಹಾರ ಮಾಡುವುದಿದ್ದರೂ ಆಧಾರ್ ಕಾರ್ಡ್ ಲಿಂಕ್ (Aadhaar card link) ಎನ್ನುವುದು ಬಹಳ ಮುಖ್ಯವಾಗಿರುವ ವಿಚಾರವಾಗಿದೆ.
ಆಸ್ತಿ ನೋಂದಣಿ (property registration) ಮಾಡಿಕೊಳ್ಳುವುದು ಇರಬಹುದು ಅಥವಾ ಹೊಸ ಬ್ಯಾಂಕ್ ಖಾತೆ ತೆರೆಯುವುದು ಇರಬಹುದು. ಎಲ್ಲದಕ್ಕೂ ಆಧಾರ್ ಲಿಂಕ್ ಕಡ್ಡಾಯವಾಗಿದೆ.
ಇದೀಗ ಬ್ಯಾಂಕ್ ಖಾತೆಗೆ ಮಾತ್ರವಲ್ಲದೆ ರೇಷನ್ ಕಾರ್ಡ್ ಗೂ ಕೂಡ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಫ್ರೀ ಬಸ್, ಶಕ್ತಿ ಯೋಜನೆಯಲ್ಲಿ ಬದಲಾವಣೆ; ಈ ತಪ್ಪು ಮಾಡಿದ್ರೆ 500 ರೂ. ದಂಡ
ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್! (Ration card – Aadhaar card link)
ಸರ್ಕಾರದ ಯಾವುದೇ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರು ಕೂಡ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಎಲ್ಲವೂ ಬಹಳ ಮುಖ್ಯವಾಗಿರುತ್ತದೆ ಹಾಗೂ ಎಲ್ಲವೂ ಒಂದಕ್ಕೊಂದು ಲಿಂಕ್ ಆಗಿರಬೇಕು.
ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್ ಜೊತೆಗೆ ಲಿಂಕ್ ಮಾಡದೆ ಇದ್ದಲ್ಲಿ ಅನ್ನಭಾಗ್ಯ ಯೋಜನೆ (Annabhagya scheme) ಯ ಹಣವು ಕೂಡ ನಿಮ್ಮ ಖಾತೆಗೆ ತಲುಪುವುದಿಲ್ಲ ಹಾಗಾಗಿ ತಕ್ಷಣ ನೀವು ರೇಷನ್ ಕಾರ್ಡ್ ಜೊತೆಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
ಜಮೀನು, ಆಸ್ತಿ ಖರೀದಿ ಮಾಡುವವರಿಗೆ ಹೊಸ ನಿಯಮ! ನೋಂದಣಿಗೆ ಹೊಸ ರೂಲ್ಸ್
ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡುವುದು ಹೇಗೆ?
*ಆನ್ಲೈನ್ ನಲ್ಲಿ ಸುಲಭವಾಗಿ ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡಬಹುದಾಗಿದ್ದು, ಇದಕ್ಕಾಗಿ ಮೊದಲು https://ahara.kar.nic.in/Home/EServices ಆಹಾರ ಇಲಾಖೆಯ ಈ ಅಧಿಕೃತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ.
*ನಂತರ ಈ ಸೇವೆಗಳು ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಿ.
*ಅದರಲ್ಲಿ ಈ ಪಡಿತರ ಚೀಟಿ ಎನ್ನುವ ಟ್ಯಾಬ್ ಮೇಲೆ ಕ್ಲಿಕ್ ಮಾಡಿದ್ರೆ ಯು ಐ ಡಿ ಲಿಂಕ್ ಎನ್ನುವ ಆಯ್ಕೆ ಕಾಣಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.
*ಈಗ ಮತ್ತೊಂದು ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಿ.
*UID linking for RC members ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
*ಈಗ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ ಗೋ ಎಂದು ಕ್ಲಿಕ್ ಮಾಡಬೇಕು.
*ನಿಮ್ಮ ಮೊಬೈಲ್ಗೆ ಒಂದು ಓಟಿಪಿ ಕಳುಹಿಸಲಾಗುತ್ತದೆ.
*ಓಟಿಪಿ ಯನ್ನು ನಮೂದಿಸಿ ಬಳಿಕ ರೇಷನ್ ಕಾರ್ಡ್ ನಂಬರ್ ಹಾಕಿ ಸಬ್ಮಿಟ್ ಎಂದು ಕೊಡಿ. ಇಷ್ಟು ಮಾಡಿದ್ರೆ ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಸಂಖ್ಯೆ ಆನ್ಲೈನ್ ಮೂಲಕವೇ ಲಿಂಕ್ ಆಗುತ್ತದೆ.
ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ಹೊಸ ಆದೇಶ
ಆಫ್ ಲೈನ್ (offline) ಮೂಲಕ ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮಾಡುವುದಿದ್ದರೆ ಹತ್ತಿರದ ಆಹಾರ ಇಲಾಖೆಯ (food department) ಸ್ಥಳೀಯ ಕಚೇರಿಗೆ ಹೋಗಿ ರೇಷನ್ ಕಾರ್ಡ್ ಜೆರಾಕ್ಸ್ ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ವಿವರ ನೀಡಿದರೆ ಲಿಂಕ್ ಮಾಡಿಸಿಕೊಳ್ಳಬಹುದು.
Link Aadhaar Card to Ration Card to get Free Rice, Gruha Lakshmi Scheme Money