ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10 ಮಂದಿಗೆ ಗಾಯ

ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದಲ್ಲಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಒಂದೂವರೆ ವರ್ಷದ ಮಗು ಮೃತಪಟ್ಟಿದೆ, 10 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

  • ಲಾರಿ-ಬಸ್ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು
  • ಕೆಎಸ್‌ಆರ್‌ಟಿಸಿ ಬಸ್ನಲ್ಲಿದ್ದ 10 ಮಂದಿಗೆ ಗಾಯ
  • ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಲಾರಿ ಮತ್ತು ಕೆಎಸ್‌ಆರ್‌ಟಿಸಿ ಬಸ್ (KSRTC Bus) ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ನಡೆದಿದೆ.

ಕುಮಟಾದಿಂದ ಅಂಕೋಲಾಕ್ಕೆ ತೆರಳುತ್ತಿದ್ದ ಬಸ್‌ಗೆ, ಎದುರಿನಿಂದ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಒಟ್ಟು 10 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅವರಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ (KIMS) ಕರೆದೊಯ್ಯಲಾಗಿದೆ.

ಘಟನೆ ಕುರಿತು ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ (Ankola Police Station) ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories