ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಶಾಲಾ ಬಸ್ ಪಲ್ಟಿ

ಕೋಲಾರ ಜಿಲ್ಲೆ ಮಾಲೂರು ಶಾಲಾ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.

  • ಶಾಲಾ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ.
  • ಗಾಯಗೊಂಡರ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲು.
  • ಮಾಲೂರು ಮಾಸ್ತಿಹಳ್ಳ ಗ್ರಾಮದಿಂದ ಪ್ರವಾಸಕ್ಕೆ ತೆರಳುತ್ತಿದ್ದ ಬಸ್.

ಶಾಲಾ ಬಸ್ ಪಲ್ಟಿಯಾಗಿ (School Bus Overturns) 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು (Kolar District Malur) ತಾಲೂಕಿನ ಮಾಸ್ತಿಹಳ್ಳ ಗ್ರಾಮದಿಂದ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ದುರಂತಕ್ಕೊಳಗಾಗಿದೆ.

ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಬಸ್ ಕಾರವಾರ ತಾಲೂಕಿನ ಅರೋಳಿ ಕ್ರಾಸ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರವಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಶಾಲಾ ಬಸ್ ಪಲ್ಟಿ

Malur School Bus Overturns in Karwar, Over 30 Students Injured

English Summary
Related Stories