ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ
ಮಂಡ್ಯ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ (POCSO Court) 17 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ (rape) ಪ್ರಕರಣದಲ್ಲಿ ಅಪರಾಧಿಯನ್ನು ದೋಷಿ ಎಂದು ಘೋಷಿಸಿ, 20 ವರ್ಷಗಳ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದೆ.
- ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಮತ್ತು 50 ಸಾವಿರ ದಂಡ
- 2019ರ ಘಟನೆ, ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ಧ
- ಬಾಲಕಿಗೆ 50,000 ರೂ. ಪರಿಹಾರ ನೀಡುವಂತೆ ನ್ಯಾಯಾಲಯದ ಆದೇಶ
ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದಲ್ಲಿ 2019ರಲ್ಲಿ ನಡೆದ ಧಾರುಣ ಘಟನೆಗೆ ಇದೀಗ ನ್ಯಾಯ ದೊರೆತಿದೆ. ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ (sexual assault) ಎಸಗಿದ ಯಶ್ವಂತ್ (33) ಎಂಬಾತನನ್ನು ಪೋಕ್ಸೋ ವಿಶೇಷ ನ್ಯಾಯಾಲಯವು (Special Court) ಅಪರಾಧಿ ಎಂದು ತೀರ್ಮಾನಿಸಿದ್ದು, 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ಳೂರು ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಎಂ. ನಂಜಪ್ಪ ಅವರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಆರೋಪಿಗೆ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿತ್ತು. ಈತ 17 ವರ್ಷದ ಬಾಲಕಿಯನ್ನು ನಂಬಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದು, ಈ ಪ್ರಕರಣ ಬಯಲಿಗೆ ಬಂದಿತ್ತು.
ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಂದು, ಶವ ನದಿಗೆ ಎಸೆದ ಪತ್ನಿ
ಪೋಕ್ಸೋ (POCSO Act) ಅಡಿಯಲ್ಲಿ ನಡೆಸಿದ ವಿಚಾರಣೆಯಲ್ಲಿ ನ್ಯಾಯಾಧೀಶ ಬಿ. ದಿಲೀಪ್ ಕುಮಾರ್ ಅವರಿದ್ದ ಪೀಠ, ಯಶ್ವಂತ್ ಅಪರಾಧಿ ಎಂದು ನಿರ್ಧರಿಸಿದೆ. ಹೀಗಾಗಿ, 6 ತಿಂಗಳ ಸಜೆ ಮತ್ತು 2,500 ರೂ. ದಂಡ ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ 20 ವರ್ಷಗಳ ಸಜೆ ಮತ್ತು 50,000 ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಲಾಗಿದೆ.
ಅಲ್ಲದೆ, ಪೀಡಿತೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
Man Gets 20-Year Jail for Assaulting Minor
Our Whatsapp Channel is Live Now 👇