ಮಂಡ್ಯ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಮಕ್ಕಳಿಗೆ ಗಂಭೀರ ಗಾಯ
ಮಳವಳ್ಳಿ ಪಟ್ಟಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದು, ಅವರ ಇಬ್ಬರು ಮಕ್ಕಳು ತೀವ್ರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಬೊಲೆರೋ ವಾಹನ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
- ವೇಗದ ಬೊಲೆರೋ ಡಿಕ್ಕಿ, ಮಹಿಳೆ ಸ್ಥಳದಲ್ಲೇ ಸಾವು
- 7 ಮತ್ತು 5 ವರ್ಷದ ಮಕ್ಕಳು ತೀವ್ರ ಗಾಯ
- ಪ್ರಕರಣ ದಾಖಲು, ಪೊಲೀಸ್ ತನಿಖೆ ಪ್ರಾರಂಭ
Mandya : ಮಳವಳ್ಳಿಯ ಕೊಳ್ಳೆಗಾಲ (Kollegal) ರಸ್ತೆಯ ಕಣಿಗಲ್ ಹಳ್ಳದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಶಿಲ್ಪಾ (39) ಅವರು ತಮ್ಮ ಇಬ್ಬರು ಮಕ್ಕಳನ್ನು (Children) ಶಾಲೆಯಿಂದ (School) ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಅಪಘಾತದ ಪರಿಣಾಮ ತಲೆಗೆ ತೀವ್ರ ಪೆಟ್ಟುಬಿದ್ದು, ಶಿಲ್ಪಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ತೀವ್ರವಾಗಿ ಗಾಯಗೊಂಡ ಇಬ್ಬರು ಮಕ್ಕಳನ್ನು ತಕ್ಷಣವೇ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ (Postmortem) ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕವನ್ನು ಮೂಡಿಸಿದೆ.
Mandya Tragic Accident, Woman Dies, Two Children Injured