ತಾಯಿ ಇಲ್ಲದ 8 ವರ್ಷದ ಬಾಲಕಿ ಮೇಲೆ ಪಕ್ಕದ ಮನೆ ವ್ಯಕ್ತಿಯಿಂದ ಅತ್ಯಾಚಾರ! ಯಾರು ಇಲ್ಲದ ವೇಳೆ ಕೃತ್ಯ

ಬೀದರ್ ಜಿಲ್ಲೆಯಲ್ಲಿ ಎಂಟು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಕ್ಕದ ಮನೆಯ ವ್ಯಕ್ತಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

  • ಮನೆಯಲ್ಲಿ ಯಾರು ಇಲ್ಲದ ವೇಳೆ ಕೃತ್ಯ ಆರೋಪ
  • ಬಾಲಕಿ ಆಸ್ಪತ್ರೆಗೆ ದಾಖಲು
  • ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ಬೀದರ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಎಂಟು ವರ್ಷದ ಬಾಲಕಿಯ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಅಮಾನವೀಯ ಕೃತ್ಯ ಎಸಗಿದ ಆರೋಪ ಕೇಳಿಬಂದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮೇ 7ರಂದು ಬಾಲಕಿಯ ತಂದೆ ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಆರೋಪಿಯು ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಘಟನೆಯ ಬಳಿಕ ಬಾಲಕಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತ್ರಸ್ತೆಯ ತಂದೆ ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯಾಗಿರುವ ಧನರಾಜ್ ಕಾಂಬಳೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಜಿಲ್ಲೆಯ ಜನರಲ್ಲಿ ಆಕ್ರೋಶ ಹುಟ್ಟಿಸಿದ್ದು, ಮಕ್ಕಳ ಸುರಕ್ಷತೆ ಕುರಿತು ಮತ್ತೆ ಗಂಭೀರ ಚರ್ಚೆ ಆರಂಭವಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories