ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ! ಮತ್ತು ಬರುವ ಔಷಧಿ ನೀಡಿ ಕೃತ್ಯ

ತಾಯಿಯ ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕ್ವಾಟ್ರಸ್‌ಗೆ ಕರೆದೊಯ್ದ ಡಿ-ಗ್ರೂಪ್ ನೌಕರ, ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾನೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಅಮಾನವೀಯ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ತಾಯಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆಸ್ಪತ್ರೆಯ ಡಿ-ಗ್ರೂಪ್ ನೌಕರನೇ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ.

ಆರೋಪಿ ಅಜಯ್ ಮದಕರಿ (37) ಎಂಬಾತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಮಾತಿನಲ್ಲಿ ನಂಬಿಕೆ ಮೂಡಿಸಿದ್ದಾನೆ ಎನ್ನಲಾಗಿದೆ. ನಂತರ ಆಕೆಯನ್ನು ತನ್ನ ಕ್ವಾಟ್ರಸ್‌ಗೆ ಕರೆದೊಯ್ದು ಮತ್ತು ಬರುವ ಔಷಧಿ ನೀಡಿ ದುಷ್ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ಬಳಿಕ ಬಾಲಕಿಯ ಆರೋಗ್ಯದಲ್ಲಿ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ತಾಯಿಗೆ ಅನುಮಾನ ಮೂಡಿದೆ. ನಂತರ ಬಾಲಕಿ ನಡೆದ ಘಟನೆ ಬಗ್ಗೆ ವಿವರಿಸಿದ್ದಾಳೆ ಎನ್ನಲಾಗಿದ್ದು, ತಾಯಿ ತಕ್ಷಣವೇ ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿದ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಸರ್ಕಾರಿ ಆಸ್ಪತ್ರೆಯಲ್ಲೇ ಈ ರೀತಿಯ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಚಿಕಿತ್ಸೆಗಾಗಿ ಬರುವ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ಸ್ಥಳೀಯರು ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories