Watch Video: ಕರುವನ್ನು ಕದ್ದೊಯ್ದ ಗೋಕಳ್ಳರು; ಗಾಡಿ ಹಿಂದೆಯೇ ಓಡಿದ ತಾಯಿ ಹಸು

ಮೂಡಿಗೆರೆ ಸಮೀಪ ಕರುವನ್ನು ಹಗ್ಗದಿಂದ ಎಳೆದುಕೊಂಡು ವಾಹನಕ್ಕೆ ತುಂಬಿದ ಆರೋಪ; ತಾಯಿ ಹಸು ವಾಹನದ ಹಿಂದೆ ಅಸಹಾಯಕವಾಗಿ ಓಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Viral Video : ಮೂಡಿಗೆರೆ ಪಟ್ಟಣದ ಸಮೀಪದ ಬಿಳಗುಳ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಕರುವನ್ನು ದುಷ್ಕರ್ಮಿಗಳು ಬಲವಂತವಾಗಿ ಕೊಂಡೊಯ್ಯುತ್ತಿದ್ದಾಗ, ತಾಯಿ ಹಸು ವಾಹನದ ಹಿಂದೆ ಓಡಿದ ದೃಶ್ಯ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಆ.4ರ ಭಾನುವಾರ ತಡರಾತ್ರಿ ನಡೆದಿದೆ ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 173ರ (NH 173) ಸಮೀಪ ತಡರಾತ್ರಿ ಬಂದ ಆರೋಪಿಗಳು, ಹಸುವಿನ ಕತ್ತಿಗೆ ಹಗ್ಗ ಹಾಕಿ ಎಳೆದುಕೊಂಡು ಹೋಗಿ ವಾಹನಕ್ಕೆ ತುಂಬಿದ್ದಾರೆ ಎನ್ನಲಾಗಿದೆ. ಕರುವನ್ನು ಕರೆದೊಯ್ಯುತ್ತಿದ್ದ ವಾಹನದ ಹಿಂದೆ ತಾಯಿ ಹಸು ರಸ್ತೆಯಲ್ಲಿ ಓಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ದಾಖಲಾಗಿದೆ.

ಇದನ್ನೂ ಓದಿ: ಭೀಕರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಸಾವು

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಮೂಡಿಗೆರೆ ತಾಲೂಕಿನಲ್ಲಿ (Mudigere) ಇತ್ತೀಚಿನ ದಿನಗಳಲ್ಲಿ ಗೋವುಗಳ ಕಳವು ಪ್ರಕರಣಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಬೇಕು ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Mudigere Police Station) ಪರಿಶೀಲನೆ ಮುಂದುವರಿದಿದೆ.

 

View this post on Instagram

 

A post shared by Udayavani (@udayavaniweb)

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories