ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವು
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ನಗರದಲ್ಲಿ ಈ ಘಟನೆ ನಡೆದಿದೆ.
ಮೈಸೂರು (Mysuru): ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳು (Software Engineers) ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ನಗರದಲ್ಲಿ ಈ ಘಟನೆ ನಡೆದಿದೆ.
ಹೈದರಾಬಾದ್ ಮೂಲದ ಸಾಯಿಕೃಷ್ಣ (30) ಮತ್ತು ಸಂದೀಪ್ (31) ಮೃತಪಟ್ಟಿದ್ದು, ಜಗದೀಶ್ ಮತ್ತು ಚಾಲಕ ಹರಿಕೃಷ್ಣ ಗಾಯಗೊಂಡಿದ್ದಾರೆ. ಹೈದರಾಬಾದ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಗಳು ಹೊಸ ವರ್ಷಾಚರಣೆಗೆಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ತೆರಳಲು ಸ್ಕೋಡಾ ಕಾರಿನಲ್ಲಿ ಮೈಸೂರಿಗೆ ಬಂದಿದ್ದರು.
ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹರಿಕೃಷ್ಣ ಮತ್ತು ಜಗದೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಂದೀಪ್ ಮತ್ತು ಸಾಯಿಕೃಷ್ಣ ಸಾವನ್ನಪ್ಪಿದ್ದು, ಉಳಿದ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mysuru: Two Software Engineers Dead, Two Injured in Car Accident