ಅನ್ನಭಾಗ್ಯ ಯೋಜನೆ ಹಣ DBT ಆಗದೆ ಇರುವವರಿಗೆ ಸರ್ಕಾರದ ಹೊಸ ಮಾರ್ಗಸೂಚಿ!

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆ (guarantee schemes) ಗಳಲ್ಲಿ ಅನ್ನಭಾಗ್ಯ ಯೋಜನೆ (Annabhagya scheme) ಕೂಡ ಒಂದು. ಬಡತನ ರೇಖೆಗಿಂತ ಕೆಳಗಿನವರು ಬಿಪಿಎಲ್ ಕಾರ್ಡ್ (BPL card) ಹೊಂದಿದ್ದರೆ ಅಂತವರಿಗೆ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಉಚಿತ ಪಡಿತರ ವಿತರಣೆ ಮಾಡಲಾಗುವುದು.

ಅದ್ಯತ ಪಡಿತರ ಚೀಟಿ ಹೊಂದಿರುವವರಿಗೆ ಕೇಂದ್ರ ಸರ್ಕಾರ ಈಗಾಗಲೇ ಐದು ಕೆಜಿ ಉಚಿತ ಅಕ್ಕಿಯನ್ನು ವಿತರಣೆ ಮಾಡುತ್ತಿದೆ. ಇದರ ಜೊತೆಗೆ ರಾಜ್ಯ ಸರ್ಕಾರ ಕೂಡ 5 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ತಿಳಿಸಿತ್ತು ಆದರೆ ಇದು ಸಾಧ್ಯವಾಗಿಲ್ಲ.

ಬಿಪಿಎಲ್ ಕಾರ್ಡ್ ಇರೋರಿಗೆ ಗುಡ್ ನ್ಯೂಸ್; ಹೊಸ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!

ಹೌದು, ಸರ್ಕಾರ ಪ್ರಣಾಳಿಕೆಯಲ್ಲಿ ತಿಳಿಸಿದಂತೆ 5 ಕೆಜಿ ಉಚಿತವಾಗಿ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಬೇಕಾಗಿತ್ತು. ಆದರೆ ಅಕ್ಕಿ ದಾಸ್ತಾನು ಅಷ್ಟು ದೊಡ್ಡ ಪ್ರಮಾಣದಲ್ಲಿ ರಾಜ್ಯ ಸರ್ಕಾರದ ಬಳಿ ಇಲ್ಲದೆ ಇರುವುದರಿಂದ ಕಳೆದ ಆರು ತಿಂಗಳಿನಿಂದಲೂ ಅಕ್ಕಿಯ ಬದಲು ಹಣವನ್ನ ಫಲಾನುಭವಿಗಳ ಖಾತೆಗೆ (Bank Account) ಜಮಾ ಮಾಡಲಾಗುತ್ತಿದೆ.

ಯಾವಾಗ ಅಕ್ಕಿ ಉಚಿತವಾಗಿ ಸಿಗುತ್ತದೆ ಎಂದು ಜನ ನಿರೀಕ್ಷೆ ಮಾಡುತ್ತಿದ್ದಾರೆ. ಆದರೆ ಸರ್ಕಾರದ ಈ ಪ್ರಯತ್ನಕ್ಕೆ ಇದುವರೆಗೆ ಫಲ ಸಿಕ್ಕಿಲ್ಲ. ಹಾಗಂದ ಮಾತ್ರಕ್ಕೆ ಫಲಾನುಭವಿಗಳಿಗೆ ಸರ್ಕಾರ ನೀಡಿದ ಭರವಸೆಯನ್ನು DBT ಮೂಲಕ ಈಡೇರಿಸಿದೆ. ಅಂದರೆ ಫಲಾನುಭವಿಗಳ ಖಾತೆಗೆ ಅಕ್ಕಿಯ ಬದಲು ಹಣವನ್ನು ಜಮಾ (Money Deposit) ಮಾಡಲಾಗುತ್ತಿದೆ.

ಇನ್ಮುಂದೆ ಈ ಮಹಿಳೆಯರು ಎಷ್ಟೇ ಪ್ರಯತ್ನ ಪಟ್ಟರು ಸಿಗೋಲ್ಲ ಗೃಹಲಕ್ಷ್ಮಿ ಯೋಜನೆ ಹಣ

ಅನ್ನಭಾಗ್ಯ ಹಣ ಇನ್ನೂ ಬಂದಿಲ್ಲ!

ಸುಮಾರು 8500 ಫಲಾನುಭವಿ ಜನರ ಖಾತೆಗೆ ಅನ್ನಭಾಗ್ಯ ಹಣ ಜಮಾ ಆಗಿಲ್ಲ. ಇದಕ್ಕೆ ಕೆಲವು ತಾಂತ್ರಿಕ ದೋಷಗಳು ಕಾರಣವಾಗಿದ್ದು, ಆಹಾರ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿದರೆ ನಿಮ್ಮ ಈ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಇನ್ನು ಎರಡನೆಯದಾಗಿ ಸಾಕಷ್ಟು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಈಕೆ ವೈಸಿ (E-KYC)ಆಗಿಲ್ಲ. ಆಧಾರ್ ಲಿಂಕ್ ಕಡ್ಡಾಯವಾಗಿದ್ದು, ಆ ಕೆಲಸ ಮಾಡಿಕೊಳ್ಳದೆ ಇದ್ದರೆ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ. ಹಾಗಾಗಿ ನಿಮ್ಮ ಬ್ಯಾಂಕ್ ಖಾತೆ ಎಲ್ಲಿದೆಯೋ ಅದೇ ಬ್ಯಾಂಕ್ ಗೆ ಭೇಟಿ ನೀಡಿ ಸಿಬ್ಬಂದಿಗಳ ಬಳಿ ನಿಮ್ಮ ಖಾತೆಗೆ ಇಲ್ಲವೋ ಎನ್ನುವುದನ್ನು ಚೆಕ್ ಮಾಡಿ.

ಮಾರ್ಚ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ ಆರಂಭ; ಹಣ ಬಂದಿದ್ಯಾ ಚೆಕ್ ಮಾಡಿಕೊಳ್ಳಿ

Annabhagya Schemeಮಾರ್ಚ್ ತಿಂಗಳ ಹಣ ಬಿಡುಗಡೆ!

ಈಗಾಗಲೇ ಆರು ಕಂತಿನ ಅನ್ನಭಾಗ್ಯ ಯೋಜನೆ ಮೂಲಕ ಹಣವನ್ನು ಫಲಾನುಭವಿಗಳ ಖಾತೆಗೆ ಡಿ ಬಿ ಟಿ ಮಾಡಲಾಗಿದೆ. ಇನ್ನು 7ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಮಾರ್ಚ್ 2ನೇ ವಾರದಿಂದ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

ಇನ್ನು ನೀವು ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡರೆ ಹಿಂದಿನ ತಿಂಗಳಿನ ಹಣವು ಕೂಡ ಒಟ್ಟಿಗೆ ಜಮಾ ಆಗುವ ಸಾಧ್ಯತೆ ಇದೆ. https://www.karnataka.gov.in/ ಆಹಾರ ಇಲಾಖೆಯ ಈ ಅಧಿಕೃತ ವೆಬ್ಸೈಟ್ನಲ್ಲಿ ನೀವು ನಿಮ್ಮ ಖಾತೆಗೆ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿದ್ಯೋ ಇಲ್ಲವೋ ಎನ್ನುವುದನ್ನು ತಿಳಿದುಕೊಳ್ಳಬಹುದು.

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದ್ದೀರಾ? ಈ ಕಾರಣಕ್ಕೆ ರದ್ದಾಗುತ್ತೆ ನಿಮ್ಮ ಅರ್ಜಿ

ಸಾಕಷ್ಟು ಜನರ ಮೊಬೈಲ್ ಸಂಖ್ಯೆಗೆ ನೋಟಿಫಿಕೇಶನ್ ಬರುವುದಿಲ್ಲ ಹಾಗಾಗಿ ನೀವು ತಿಂಗಳ ಕೊನೆಯಲ್ಲಿ ಬ್ಯಾಂಕ್ಗೆ ನಿಮ್ಮ ಪಾಸ್ ಬುಕ್ ತೆಗೆದುಕೊಂಡು ಹೋಗಿ ಅಪ್ಡೇಟ್ ಮಾಡಿಸಿ. ಇದರಿಂದ ನಿಮ್ಮ ಖಾತೆಗೆ ಹಣ ಬಂದಿರುವ ದಿನಾಂಕ ಸಮಯ ಎಲ್ಲವೂ ಕೂಡ ತಿಳಿಯುತ್ತದೆ.

new guideline for those who not Get Annabhagya Yojana Money

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories