ಈ ದಾಖಲೆಗಳು ಇದ್ರೆ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿಗೆ ಅವಕಾಶ! ಖಡಕ್ ಸೂಚನೆ
ಅಗತ್ಯ ದಾಖಲೆಯಾಗಿರುವ ಆಧಾರ್ ಕಾರ್ಡ್ (Aadhaar card) ಎಷ್ಟು ಮುಖ್ಯವೋ ಅದೇ ರೀತಿ ಪಡಿತರ ಚೀಟಿ (Ration Card) ಕೂಡ ಬಹಳ ಮುಖ್ಯವಾಗಿದೆ
ಇತ್ತೀಚಿನ ದಿನಗಳಲ್ಲಿ ಭಾರತೀಯ ನಾಗರಿಕರಿಗೆ ಬೇಕಾಗಿರುವ ಅಗತ್ಯ ದಾಖಲೆಯಾಗಿರುವ ಆಧಾರ್ ಕಾರ್ಡ್ (Aadhaar card) ಎಷ್ಟು ಮುಖ್ಯವೋ ಅದೇ ರೀತಿ ಪಡಿತರ ಚೀಟಿ (Ration Card) ಕೂಡ ಬಹಳ ಮುಖ್ಯವಾಗಿದೆ.
ಅದರಲ್ಲೂ ಆದ್ಯತಾ ಪಡಿತರ ಚೀಟಿಯ ಆದ್ಯತೆಯು ಹೆಚ್ಚಾಗಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿ ಆಗಬೇಕು ಅಂದ್ರೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ. ಹೀಗಾಗಿ ಹೊಸದಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಯಾವಾಗ ಆರಂಭವಾಗಬಹುದು ಎಂದು ಜನರು ಕಾದು ಕುಳಿತಿದ್ದಾರೆ.
ಗೃಹಲಕ್ಷ್ಮಿ ಹಣ ಯಾರಿಗೆ ಬಂದಿಲ್ವೋ ಅವರಿಗೆ ಬಿಗ್ ಅಪ್ಡೇಟ್! ಪೆಂಡಿಂಗ್ ಹಣ ಪಡೆಯಿರಿ
ಲೋಕಸಭಾ ಎಲೆಕ್ಷನ್ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜನರಿಗೆ ಅನುಕೂಲವಾಗುವಂತಹ ಸಾಕಷ್ಟು ಪ್ರಮುಖ ಕೆಲಸಗಳನ್ನು ಬಹಳ ಮುತುವರ್ಜಿಯಿಂದ ಮಾಡುತ್ತಿದೆ ಎನ್ನಬಹುದು.
ಇದಕ್ಕೆ ಪೂರಕವಾಗಿ ಈಗಾಗಲೇ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ (food minister K.H muniyappa ) ತಿಳಿಸಿರುವಂತೆ ಮಾರ್ಚ್ 31ರ ಒಳಗೆ ಸಲ್ಲಿಕೆ ಆಗಿರುವ ಪಡಿತರ ಚೀಟಿ ಅರ್ಜಿಗಳ ಪರಿಶೀಲನೆ ಮಾಡಿ ಹೊಸ ಪಡಿತರ ಚೀಟಿಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುವುದು.
ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ (Apply for new ration card)
ಇನ್ನು ಈಗಾಗಲೇ ಎರಡು ಲಕ್ಷದ 96 ಸಾವಿರ ಅರ್ಜಿಗಳು ಸರ್ಕಾರದ ಬಳಿ ಇವೆ ಇವುಗಳನ್ನ ಪರಿಶೀಲಿಸಿ ಬಿಪಿಎಲ್ ಕಾರ್ಡ್ ಮತ್ತು ಎಪಿಎಲ್ ಕಾರ್ಡ್ ಎಂದು ವರ್ಗಿಕರಿಸಿ ಫಲಾನುಭವಿಗಳಿಗೆ ಏಪ್ರಿಲ್ ಒಂದರಿಂದ ವಿತರಣೆ ಮಾಡಲಾಗುವುದು. ಇದೇ ರೀತಿ ಹೊಸ ಪಡಿತರ ಚೀಟಿಗಾಗಿಯೂ ಕೂಡ ನೀವು ಅರ್ಜಿ ಸಲ್ಲಿಸಬಹುದಾಗಿದ್ದು, ಇದಕ್ಕೆ ಬೇಕಾಗಿರುವ ಅರ್ಹತೆಗಳು ಏನು ನೋಡೋಣ.
ಅನ್ನಭಾಗ್ಯ ಹಣ ಬಿಡುಗಡೆ ಆಯ್ತು, ಖಾತೆ ಚೆಕ್ ಮಾಡಿಕೊಳ್ಳಿ! ಹಣ ಬಾರದಿದ್ರೆ ಈ ರೀತಿ ಮಾಡಿ
ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬೇಕಾಗಿರುವ ಅರ್ಹತೆಗಳು
* ಕರ್ನಾಟಕ ರಾಜ್ಯದ ಕಾಯಂ ನಿವಾಸಿಗಳಾಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿದ್ದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ
* ಮದುವೆಯಾದ ನವದಂಪತಿಗಳು ಕುಟುಂಬದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರೆ ಅರ್ಜಿ ಸಲ್ಲಿಸಬಹುದು.
* ನಿಮ್ಮ ಆದಾಯದ ಆಧಾರದ ಮೇಲೆ ಬಿಪಿಎಲ್ ಮತ್ತು ಎಪಿಎಲ್ ಎಂದು ವಿಂಗಡಣೆ ಮಾಡಿ ಕಾರ್ಡ್ ವಿತರಣೆ ಮಾಡಲಾಗುವುದು.
* ಸರ್ಕಾರಿ ನೌಕರಿಯಲ್ಲಿ ಇರುವವರು ಇನ್ಕಮ್ ಟ್ಯಾಕ್ಸ್ ಪಾವತಿ ಮಾಡುವವರು ಆದ್ಯತಾ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಹರಲ್ಲ.
ಇಂತಹ ರೇಷನ್ ಕಾರ್ಡ್ ರದ್ದು, ರಾಜ್ಯ ಸರ್ಕಾರದ ಖಡಕ್ ನಿರ್ಧಾರ! ವಿಶೇಷ ಸೂಚನೆ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!
ಕುಟುಂಬದ ಎಲ್ಲಾ ಸದಸ್ಯರ ವಿವರ
ಎಲ್ಲಾ ಸದಸ್ಯರ ಆಧಾರ್ ಕಾರ್ಡ್
ಬ್ಯಾಂಕ್ ಖಾತೆಗೆ ಕೆವೈಸಿ (E-KYC) ಆಗಿರುವುದು ಕಡ್ಡಾಯ
ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
ಡ್ರೈವಿಂಗ್ ಲೈಸೆನ್ಸ್ ಅಥವಾ ಓಟರ್ ಐಡಿ
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಕುಟುಂಬದ ಎಲ್ಲಾ ಸದಸ್ಯರ ಫೋಟೋ
ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ! ನಿಮ್ಮ ಖಾತೆ ಪರಿಶೀಲಿಸಿ
ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಬಯಸುವವರು ಮೇಲಿನ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ. April 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಇದು ಕೆಲವೇ ದಿನಗಳ ಅವಕಾಶವಾಗಿದ್ದು, ನೀವು ಎಲ್ಲಾ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡಿದೆ ಬೇಗ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಆಹಾರ ಇಲಾಖೆಯ https://ahara.kar.nic.in/ ಈ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿ ಗಾಗಿ ಅರ್ಜಿ ಸಲ್ಲಿಸಬಹುದು. ಆದರೆ ದಿನದ 24 ಗಂಟೆ ಕೂಡ ಈ ಆನ್ಲೈನ್ ಪೋರ್ಟಲ್ ತೆರೆದಿರುವುದಿಲ್ಲ. ಕೆಲವೇ ಅವಧಿಗೆ ಮಾತ್ರ ಆನ್ಲೈನ್ ಪೋರ್ಟಲ್ ಓಪನ್ ಆಗುತ್ತದೆ. ಆದ್ದರಿಂದ ನೀವು ನಿಮ್ಮ ಹತ್ತಿರದ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸುವುದು ಒಳ್ಳೆಯದು.
New ration card application is allowed only if these documents are available