ಹೊಸ ಪಡಿತರ ಚೀಟಿ (Ration Card) ಪಡೆದುಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ. ಅಷ್ಟೇ ಅಲ್ಲದೆ ಇಲ್ಲಿಯವರೆಗೆ ಸಲ್ಲಿಕೆ ಆಗಿರುವ ಪಡಿತರ ಚೀಟಿಗಳ ವಿಲೇವಾರಿಯನ್ನು ಕೂಡ ಸರ್ಕಾರ ಮಾಡಲು ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿ ಸಲ್ಲಿಕೆ ಆಗಿರುವ 2.95 ಲಕ್ಷ ಪಡಿತರ ಚೀಟಿ ಅರ್ಜಿಗಳಲ್ಲಿ ಬಹುತೇಕ ಅರ್ಜಿಗಳು ಇಂದಿನಿಂದ ವಿಲೇವಾರಿ ಆಗಲಿವೆ.
ಇದು ನೀವು ಕೂಡ ಹೊಸ ಪಡಿತರ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದ್ದರೆ, ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪಡಿತರ ಚೀಟಿ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು.
ಇಂದಿನಿಂದ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮೊದಲಾದ ಸೇವಾ ಕೇಂದ್ರಗಳಲ್ಲಿ ಪಡಿತರ ಚೀಟಿಯನ್ನು (Apply Ration Card) ಪಡೆದುಕೊಳ್ಳಬಹುದು.
ಅನ್ನಭಾಗ್ಯ ಯೋಜನೆ ಹಣ ಇಂತಹವರಿಗೆ ವರ್ಗಾವಣೆ ಆಗಲ್ಲ! ಬಿಗ್ ಅಪ್ಡೇಟ್
ಹೊಸ ಪಡಿತರ ಚೀಟಿ ಪಡೆಯಲು ಯಾರು ಸಲ್ಲಿಸಬಹುದು?
* ಕರ್ನಾಟಕದ ನಿವಾಸಿಗಳಾಗಿರಬೇಕು
* ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಬಡತನ ರೇಖೆಗಿಂತ ಕೆಳಗಿನವರಾಗಿರಬೇಕು. ಅಂದರೆ ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು
* ಮದುವೆಯಾದ ನಮ್ಮದಂಪತಿಗಳು ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬಹುದು
* ಯಾವುದೇ ಸರ್ಕಾರಿ ನೌಕರಿಯಲ್ಲಿದ್ದರೆ ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದರೆ ಬಿಪಿಎಲ್ ರೇಷನ್ ಕಾರ್ಡ್ ಸಿಗುವುದಿಲ್ಲ.
* ಕುಟುಂಬದಲ್ಲಿ ಯಾವುದೇ ಸದಸ್ಯನ ಹೆಸರಿನಲ್ಲಿ ರೇಷನ್ ಕಾರ್ಡ್ ಇದ್ದು ನೀವು ಅದೇ ಕುಟುಂಬದ ಸದಸ್ಯರಾಗಿದ್ದರೆ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವಂತಿಲ್ಲ.
* ನಿಮ್ಮ ಕುಟುಂಬದ ಆದಾಯದ ಆಧಾರದ ಮೇಲೆ ಬಿಪಿಎಲ್ ಅಥವಾ ಎಪಿಎಲ್ ಎಂದು ನಿರ್ಧಾರ ಮಾಡಲಾಗುವುದು.
ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣಕ್ಕೆ ಕಡ್ಡಾಯ ರೂಲ್ಸ್ ಜಾರಿ! ಬಿಗ್ ಅಪ್ಡೇಟ್
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು!
ಕುಟುಂಬದ ಎಲ್ಲಾ ಸದಸ್ಯರ ರೇಷನ್ ಕಾರ್ಡ್ ಮತ್ತು ಬಯೋಮೆಟ್ರಿಕ್ ದಾಖಲೆ
ಯಾರ ಹೆಸರಿನಲ್ಲಿ ರೇಷನ್ ಕಾರ್ಡ್ ತೆಗೆದುಕೊಳ್ಳುತ್ತೀರೋ ಅವರ ಹೆಸರಿನಲ್ಲಿ ಆದಾಯ ಪ್ರಮಾಣ ಪತ್ರ ಇರಬೇಕು (ಗೃಹಲಕ್ಷ್ಮಿ ಯೋಜನೆಯ ಹಣ ಬರಲು ರೇಷನ್ ಕಾರ್ಡ್ ಮಹಿಳೆಯರ ಹೆಸರಿನಲ್ಲಿಯೇ ಇರಬೇಕು ಹಾಗಾಗಿ ಹೊಸದಾಗಿ ರೇಷನ್ ಕಾರ್ಡ್ ಮಾಡಿ ಕೊಳ್ಳುವವರು, ಮನೆಯ ಹಿರಿಯ ಮಹಿಳೆಯ ಹೆಸರಿನಲ್ಲಿ ರೇಷನ್ ಕಾರ್ಡ್ ಮಾಡಿಸಿಕೊಳ್ಳುವುದು ಒಳ್ಳೆಯದು).
ಅರ್ಜಿ ಸಲ್ಲಿಸುವ ವ್ಯಕ್ತಿಯ ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ವಿಳಾಸದ ಪುರಾವೆ (ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ)
ಮೊಬೈಲ್ ನಲ್ಲಿಯೇ ಸುಲಭವಾಗಿ ಚೆಕ್ ಮಾಡಿಕೊಳ್ಳಿ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್!
ಅರ್ಜಿ ಸಲ್ಲಿಸುವುದು ಹೇಗೆ?
ಆಹಾರ ಇಲಾಖೆಯ ಅಧಿಕೃತ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ವೆಬ್ ಪೋರ್ಟಲ್ ಕೆಲವು ತಾಂತ್ರಿಕ ದೋಷದಿಂದ ಅಥವಾ ನೆಟ್ವರ್ಕ್ ಸಮಸ್ಯೆಯಿಂದ ಎಲ್ಲಾ ಟೈಮಿನಲ್ಲಿ ಓಪನ್ ಆಗದೆ ಇರಬಹುದು ಹಾಗಾಗಿ ನೀವು ಹತ್ತಿರದ ಸೇವಾ ಕೇಂದ್ರಗಳಿಗೆ ಅರ್ಜಿ ಸಲ್ಲಿಸುವುದು ಹೆಚ್ಚು ಸೂಕ್ತ. ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 ವರೆಗೆ ಸೇವ ಕೇಂದ್ರಗಳು ತೆರೆದಿರುತ್ತದೆ ಮತ್ತು ಈ ಸಮಯದಲ್ಲಿ ನೀವು ಅರ್ಜಿ ಸಲ್ಲಿಸಬಹುದು.
ಇಂತಹವರಿಗೆ ಸಿಗದೇ ಇರಬಹುದು ಉಚಿತ ವಿದ್ಯುತ್! ಗೃಹಜ್ಯೋತಿ ಯೋಜನೆ ಹೊಸ ಅಪ್ಡೇಟ್
new rule for those who want to get a new ration card
Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019
ಕನ್ನಡ ನ್ಯೂಸ್ ಟುಡೇ ಇಂದಿನ ಪ್ರಮುಖ ಸುದ್ದಿ ಹಾಗೂ ಬ್ರೇಕಿಂಗ್ ನ್ಯೂಸ್ ಅಪ್ಡೇಟ್ ಗಳನ್ನು ಪ್ರಸ್ತುತ ಪಡಿಸುತ್ತದೆ.