Welcome To Kannada News Today

ಸೋಮವಾರದಿಂದ ಬೈಕ್ ಸವಾರರಿಗೆ ವಿನಾಯ್ತಿ, ಆದ್ರೆ ಮೇ 3ರವರೆಗೆ ಮದ್ಯ ಮಾರಾಟ ಇಲ್ಲ : ಸಿಎಂ ಬಿಎಸ್​ವೈ

no liquor sale until May 3 says CM BS Y

🌐 Kannada News :

ಏ.20ರ ನಂತರ ರಾಜ್ಯದಲ್ಲಿ ಲಾಕ್‌ಡೌನ್‌ ಸಡಿಲಿಕೆ -ಯಡಿಯೂರಪ್ಪ 

ರಾಜ್ಯದಲ್ಲಿ ಏಪ್ರಿಲ್ 20ರ ಬಳಿಕ ಲಾಕ್ ಡೌನ್ ಗೆ ಸ್ವಲ್ಪ ಮಟ್ಟಿನ ವಿನಾಯಿತಿ ನೀಡುವುದಾಗಿ ಮುಖ್ಯಮಂತ್ರಿಗಳು ಸುಳಿವು ನೀಡಿದ್ದಾರೆ. ಐಟಿ, ಬಿಟಿಯಲ್ಲಿ ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.

ಬೆಂಗಳೂರು : ಕೋವಿಡ್ 19 ನಿರ್ವಹಣೆ ಕುರಿತಂತೆ ಇಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ರವರು ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆಯನ್ನು ನಡೆಸಿದರು.

ಏಪ್ರಿಲ್ 20ರ ಸೋಮವಾರದ ನಂತರ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚಿಸಲಾಯಿತು.ಲಾಕ್ ಡೌನ್ ಉಲ್ಲಂಘನೆಯ ದೂರುಗಳು ಹೆಚ್ಚುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈ ವೇಳೆ ಸಿಎಂ ಸೂಚನೆ ನೀಡಿದರು.

ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು,  ಏಪ್ರಿಲ್ 20ರ ನಂತರ ದ್ವಿಚಕ್ರ ವಾಹನ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಪಾಸ್ ಇಲ್ಲದೆ ದ್ವಿಚಕ್ರ ವಾಹನಗಳು ಓಡಾಡಬಹುದು ಎಂದಿದ್ದಾರೆ. ಅಂತೆಯೇ.. ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದಂತೆ ಎಚ್ಚರವಹಿಸಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಎಂದಿದ್ದಾರೆ.

ಸಾಮಾಜಿಕ ಅಂತರ ಪಾಲನೆ ಕಡ್ಡಾಯವಾಗಿ ಪಾಲಿಸಿ ಎಂದ ಅವರು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು. ಮೇ 03ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರೆಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಏಪ್ರಿಲ್ 20ರ ನಂತರ ಮದ್ಯ ಮಾರಾಟ ಶುರುವಾಗುತ್ತದೆ, ಎಂದು ಕೊಂಡಿದ್ದ ಮದ್ಯಪ್ರಿಯರಿಗೆ ಮತ್ತೊಮ್ಮೆ ಶಾಕ್ ಆಗಿದ್ದು, ಮೇ 3ರವರೆಗೂ ಮದ್ಯ ಸಿಗುವುದಿಲ್ಲ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

ಹಾಗೂ ರಾಜ್ಯದಲ್ಲಿ ಮೊನ್ನೆ 36, ನಿನ್ನೆ 44 ಕೋವಿಡ್ ಪ್ರಕಣಗಳು ವರದಿಯಾಗಿದ್ದವು. ಆದರೆ, ಇಂದು 12 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಸಮಾಧಾನಕರ ವಿಚಾರ ಎಂದು ತಿಳಿಸಿದ್ದಾರೆ

ಅಂತೆಯೇ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳನ್ನು ಒಂದೇ ಜಿಲ್ಲೆಯಾಗಿ ಪರಿಗಣಿಸಿ, 3 ಜಿಲ್ಲೆಗಳಲ್ಲಿ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

📱 Latest Kannada News ಗಳಿಗಾಗಿ Kannada News Today App ಡೌನ್ ಲೋಡ್ ಮಾಡಿಕೊಳ್ಳಿ.
📣 All Kannada News Now in our Facebook Page.
Contact for web design services Mobile