ಓಮಿಕ್ರಾನ್ ನಿಂದ ಚೇತರಿಸಿಕೊಂಡ ವೈದ್ಯರಿಗೆ ಮತ್ತೆ ಕೋವಿಡ್ ಪಾಸಿಟಿವ್ !

ಬೆಂಗಳೂರಿನಲ್ಲಿ ದಾಖಲಾದ ಮೊದಲ ಎರಡು ಓಮಿಕ್ರಾನ್ ಪ್ರಕರಣಗಳಲ್ಲಿ ಒಬ್ಬ ವೈದ್ಯ ಮತ್ತು ಇನ್ನೊಂದು ದಕ್ಷಿಣ ಆಫ್ರಿಕಾದ ವ್ಯಕ್ತಿ. ಇತ್ತೀಚೆಗಷ್ಟೇ ಓಮಿಕ್ರಾನ್ ಸೋಂಕಿಗೆ ಒಳಗಾದ ಬೆಂಗಳೂರಿನ ವೈದ್ಯರು ಬೇಗ ಚೇತರಿಸಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದರೆ ಸೋಮವಾರ ವೈದ್ಯರಿಗೆ ಕರೋನಾ ಪರೀಕ್ಷೆ ನಡೆಸಿದಾಗ ಮತ್ತೊಮ್ಮೆ ಪಾಸಿಟಿವ್ ಬಂದಿದ್ದು, ಸದ್ಯ ವೈದ್ಯರು ಕ್ವಾರಂಟೈನ್ ನಲ್ಲಿದ್ದಾರೆ ಎಂದು ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯರು ಕೊರೊನಾ ರೋಗಲಕ್ಷಣಗಳನ್ನು ತೋರಿಸಲಿಲ್ಲ ಎಂದು ಅವರು ಹೇಳಿದರು.

ಮತ್ತೊಂದೆಡೆ, ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ ದಕ್ಷಿಣ ಆಫ್ರಿಕಾದ ವ್ಯಕ್ತಿಯನ್ನು 5 ಸ್ಟಾರ್ ಹೋಟೆಲ್‌ನಲ್ಲಿ ಐಸೋಲೇಶನ್‌ನಲ್ಲಿ ಇರಿಸಲಾಗಿತ್ತು, ಆತ ಅಲ್ಲಿಂದ ತಪ್ಪಿಸಿಕೊಂಡು ದುಬೈಗೆ ಹಾರಿದ್ದಾನೆ. ದಕ್ಷಿಣ ಆಫ್ರಿಕಾದ ವ್ಯಕ್ತಿ ಹಾಗೂ ಆತನಿಗೆ ತಪ್ಪಿಸಿಕೊಳ್ಳಲು ಸಹಾಯ ಮಾಡಿದ ಹೋಟೆಲ್ ಸಿಬ್ಬಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today