ಹೊಸದಾಗಿ ರೇಷನ್ ಕಾರ್ಡ್ ಅಪ್ಲೈ ಮಾಡಿರುವ 25 ಲಕ್ಷ ಜನರಿಗೆ ಮಾತ್ರ ಸಿಗಲಿದೆ ಈ ಯೋಜನೆಯ ಫಲ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು (Annabhagya Scheme) ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್ (BPL Ration Card) ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಎಲ್ಲರಿಗೂ 10 ಕೆಜಿ ಅಕ್ಕಿ ಕೊಡುವ ಭರವಸೆ ನೀಡಿತ್ತು.
ಆದರೆ 10 ಕೆಜಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿ ಜೊತೆಗೆ ಇನ್ನು 5 ಕೆಜಿಯ ಹಣವನ್ನು ಜುಲೈ ಇಂದ ರೇಷನ್ ಕಾರ್ಡ್ ಹೊಂದಿರುವವರ ಖಾತೆಗೆ ವರ್ಗಾವಣೆ ಮಾಡುವುದಾಗಿ ತಿಳಿಸಿತ್ತು, ಈಗಾಗಲೇ ಸಾಕಷ್ಟು ಜನರು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆದಿದ್ದಾರೆ.
ಈ ವೇಳೆ ಸರ್ಕಾರದ ಈ ಸೌಲಭ್ಯ ಪಡೆಯುವುದಕ್ಕೆ ಹೊಸದಾಗಿ ರೇಷನ್ ಕಾರ್ಡ್ ಗೆ ಅರ್ಜಿ (Apply Ration Card) ಸಲ್ಲಿಸುತ್ತಿರುವವರ ಸಂಖ್ಯೆ ಜಾಸ್ತಿ ಆಗುತ್ತಿದೆ.
ಇನ್ನು ಹೊಸದಾಗಿ ರೇಷನ್ ಕಾರ್ಡ್ ಮಾಡಿಸಿಕೊಳ್ಳುವುದಕ್ಕೆ ಅರ್ಜಿ ಹಾಕಬೇಕು ಎಂದು ಜನರು ಕೂಡ ಕಾಯುತ್ತಿದ್ದಾರೆ. ಹೊಸದಾಗಿ ರೇಷನ್ ಕಾರ್ಡ್ ಮಾಡಿಸಿಕೊಳ್ಳುವ ಜನರಿಗೆ ಸರ್ಕಾರವು ಹೊಸ ಸುದ್ದಿ ನೀಡಿದ್ದು, ಇನ್ನುಮುಂದೆ ಹೊಸದಾಗಿ ರೇಷನ್ ಕಾರ್ಡ್ ಮಾಡಿಸುವವರು ಕೂಡ ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯಬಹುದು. ಪ್ರಸ್ತುತ ಅನ್ನಭಾಗ್ಯ ಯೋಜನೆಯ ಮೊದಲನೇ ಕಂತಿನ ಹಣವು ಫಲಾನುಭವಿಗಳ ಬ್ಯಾಂಕ್ ಅಕೌಂಟ್ ಗೆ (Bank Account) ಜಮೆ ಆಗಿದೆ ಎಂದು ಮಾಹಿತಿ ಸಿಕ್ಕಿದೆ.
ಎರಡನೇ ಕಂತಿನ ಹಣ ಕೂಡ ಶೀಘ್ರದಲ್ಲೇ ಜಮೆ ಆಗುತ್ತದೆ ಎಂದು ಹೇಳಲಾಗುತ್ತಿದೆ. ಈಗಾಗಲೇ 1.03 ಕೋಟಿ ರೇಷನ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 3.69 ಕೋಟಿ ಜನರಿಗೆ 606 ಕೋಟಿ ರೂಪಾಯಿ ಜಮೆ ಆಗಿದೆ.

https://ahara.kar.nic.in/status1/status_of_dbt.aspx ಈ ವೆಬ್ಸೈಟ್ ಗೆ ಭೇಟಿ ನೀಡಿ..
ಅಥವಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಗೆ ಭೇಟಿ ನೀಡುವ ಮೂಲಕ ತಿಳಿದುಕೊಳ್ಳಬಹುದು. ಅನ್ನಭಾಗ್ಯ ಯೋಜನೆಯ ಹಣವು ಡಿಬಿಟಿ ಮೂಲಕ ವರ್ಗಾವಣೆ ಆಗುತ್ತದೆ.
ಈ ಹಣ ಪಡೆಯಲು, ನಿಮ್ಮ ರೇಷನ್ ಕಾರ್ಡ್ ಗೆ ಆಧಾರ್ ಕಾರ್ಡ್ (Aadhar Card) ಮತ್ತು ಬ್ಯಾಂಕ್ ಅಕೌಂಟ್ ಲಿಂಕ್ (Bank Account Link) ಆಗಿರಬೇಕು.. ಆಗ ಮಾತ್ರ ಅನ್ನಭಾಗ್ಯ ಯೋಜನೆಯ ಹಣ ಸಿಗುತ್ತದೆ. ಇನ್ನು ಹೊಸದಾಗಿ 25 ಲಕ್ಷ ರೇಷನ್ ಕಾರ್ಡ್ ದಾರರಿಗೂ ಈ ಯೋಜನೆಯ ಫಲ ಸಿಗುತ್ತದೆ.
Only 25 lakh people who have newly applied for ration card will get the benefit of this scheme



