Karnataka NewsBangalore News

ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ! ಹೊಸ ಅರ್ಜಿ, ತಿದ್ದುಪಡಿ ಮಾಡಿಕೊಳ್ಳಿ

ಗೃಹಲಕ್ಷ್ಮಿ ಯೋಜನೆ (Gruha lakshmi scheme) ಗೆ ಇದುವರೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಯಾವ ಮಹಿಳೆಯರು ಬೇಸರಗೊಂಡಿದ್ದರೋ ಅಂತವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಮತ್ತೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿ ಕೊಡಲಾಗುವುದು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸಾಕಷ್ಟು ಮಹಿಳೆಯರು ಪ್ರತಿ ತಿಂಗಳು ತಮ್ಮ ಖರ್ಚಿಗೆ ಅನುಕೂಲವಾಗುವಂತೆ ಸರ್ಕಾರದಿಂದ ಉಚಿತವಾಗಿ 2,000 ಗಳನ್ನು ಪಡೆದುಕೊಳ್ಳುತ್ತಿದ್ದಾರೆ.

Gruha Lakshmi Yojana funds have been released, Check the women of this district

ಯುವ ನಿಧಿ ಯೋಜನೆ ಅಪ್ಡೇಟ್; ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚನೆ

ಸರ್ಕಾರದ ಕೆಲವು ನೀತಿ ನಿಯಮಗಳನ್ನು ಪಾಲಿಸಿ ಅರ್ಜಿ ಸಲ್ಲಿಕೆ (application) ಮಾಡಿರುವ ಬಹುತೇಕ ಎಲ್ಲಾ ಮಹಿಳೆಯರಿಗೂ ಕೂಡ ಪ್ರತಿ ತಿಂಗಳು ರಾಜ್ಯ ಸರ್ಕಾರ ಅವರ ಖಾತೆಗೆ (Bank Account) ನೇರವಾಗಿ 2,000 ಗಳನ್ನು ವರ್ಗಾವಣೆ (DBT) ಮಾಡುತ್ತಿದೆ.

ಗ್ರಾಮ ಒನ್ ನಲ್ಲಿ ಹೊಸ ಅರ್ಜಿ ಸ್ವೀಕಾರ!

ನೀವು ನಿಮ್ಮ ಹತ್ತಿರದ ಗ್ರಾಮ ಒನ್ ನಲ್ಲಿ ನಿಮ್ಮ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಸಮಸ್ಯೆ ಇದ್ದರೆ ಅದನ್ನ ಪರಿಹರಿಸಿಕೊಳ್ಳಬಹುದಾಗಿದೆ. ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆ ಆರಂಭವಾದ ನಂತರ ರೇಷನ್ ಕಾರ್ಡ್ ನಲ್ಲಿ ಮೊದಲ ಹೆಸರು ಮನೆಯ ಯಜಮಾನಿಯದ್ದೇ ಆಗಿದ್ದರೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ (ration card) ನಲ್ಲಿ ಯಜಮಾನನ ಹೆಸರಿನ ಬದಲು ಮನೆಯ ಒಡತಿಯ ಹೆಸರು ಸೇರಿಸಲಾಗಿದೆ. ಆದರೆ ಕೆಲವು ತಾಂತ್ರಿಕ ದೋಷ (technical issues) ಗಳಿಂದಾಗಿ ಈ ಹೆಸರು ಬದಲಾವಣೆ ಪ್ರಕ್ರಿಯೆ ಸಂಪೂರ್ಣವಾಗಿಲ್ಲ.

ಫ್ರೀ ಕರೆಂಟ್ ಖುಷಿಯಲ್ಲಿದ್ದವರಿಗೆ ಬೇಸರದ ಸುದ್ದಿ! ಮತ್ತೆ ವಿದ್ಯುತ್ ದರ ಹೆಚ್ಚಳ

Gruha Lakshmi Yojanaಅದೇ ರೀತಿ ಆಧಾರ್ ಕಾರ್ಡ್ (Aadhaar card) ಬ್ಯಾಂಕ್ ಖಾತೆ ಹಾಗೂ ರೇಷನ್ ಕಾರ್ಡ್ ಲಿಂಕ್ ಆಗಿರುವುದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಗೆ ಈಕೆ ವೈ ಸಿ (E-KYC) ಮಾಡಿಸಿಕೊಳ್ಳದೆ ಇದ್ದರೆ ಅಂತಹ ಮಹಿಳೆಯರ ಖಾತೆಗೆ ಯಾವುದೇ ಕಾರಣಕ್ಕೂ ಹಣ ಸಂದಾಯ ವಾಗುವುದಿಲ್ಲ. ಹೀಗಾಗಿ ಗ್ರಾಮ ಒನ್ (grama one) ನಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ.

ಗ್ರಾಮ ಒನ್ ನಲ್ಲಿ ಗೃಹಲಕ್ಷ್ಮಿ ಅರ್ಜಿ ಪರಿಶೀಲನೆ ಮಾಡಿಸಿಕೊಳ್ಳುವುದು ಮಾತ್ರವಲ್ಲದೆ ಹೊಸ ಅರ್ಜಿ ಗಳನ್ನು ಕೂಡ ಈಗ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಜುಲೈ -ಆಗಸ್ಟ್ ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಆರಂಭವಾಗಿದೆ.

ಸರ್ಕಾರಿ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ! ಹಕ್ಕುಪತ್ರ ವಿತರಣೆ

ಅರ್ಜಿ ಸಲ್ಲಿಸಿದ ಕೋಟ್ಯಾಂತರ ಮಹಿಳೆಯರ ಖಾತೆಗೆ ನೇರವಾಗಿ ಹಣ ಜಮಾ (Money Deposit) ಮಾಡುವ ಪ್ರಕ್ರಿಯೆಯಲ್ಲಿ ಕೆಲವೊಂದು ದೋಷಗಳು ಕೂಡ ಸಂಭವಿಸಿದ್ದು, ಇದೇ ಕಾರಣಕ್ಕೆ ಹೊಸ ಅರ್ಜಿ ಸ್ವೀಕಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಇದರಿಂದಾಗಿ ರಾಜ್ಯದಲ್ಲಿ ವಾಸಿಸುವ ಇನ್ನೂ ಲಕ್ಷಾಂತರ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲ ಪಡೆದುಕೊಳ್ಳುವಲ್ಲಿ ವಂಚಿತರಾಗಿದ್ದರು. ಇದೇ ಕಾರಣಕ್ಕೆ ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತಿದೆ. ಹತ್ತಿರದ ಗ್ರಾಮ ಒನ್ ಸಂಬಂಧಪಟ್ಟ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು! (Documents)

ರೇಷನ್ ಕಾರ್ಡ್
ಆಧಾರ್ ಕಾರ್ಡ್ (ಗಂಡ ಹೆಂಡತಿ ಇಬ್ಬರ ಆಧಾರ್ ಕಾರ್ಡ್ ಸಲ್ಲಿಸಬೇಕು)
ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ

ಗೃಹಲಕ್ಷ್ಮಿ ಯೋಜನೆಯಲ್ಲಿ ರಾತ್ರೋರಾತ್ರಿ ಹೊಸ ಬದಲಾವಣೆ! ಇನ್ಮುಂದೆ ಹೊಸ ರೂಲ್ಸ್

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? (Who can apply)

*ಅರ್ಜಿ ಸಲ್ಲಿಸುವ ಕುಟುಂಬದ ಯಾವುದೇ ಸದಸ್ಯರು ಆದಾಯ ತೆರಿಗೆ ಪಾವತಿ (tax payers) ಮಾಡುವವರಾಗಿರಬಾರದು.

*ಕುಟುಂಬದಲ್ಲಿ ಮೊದಲ ಮಹಿಳೆ ಅಥವಾ ಯಜಮಾನಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

*ಬಿಪಿಎಲ್ (BPL card) , ಅಂತ್ಯೋದಯ ಕಾರ್ಡ್ ಹೊಂದಿರುವವರು ಮಾತ್ರವಲ್ಲದೆ ಎಪಿಎಲ್ ಕಾರ್ಡ್ (APL card) ಹೊಂದಿರುವ ಮಹಿಳೆಯರು ಅರ್ಜಿ ಸಲ್ಲಿಸಬಹುದು.

*ಸರ್ಕಾರಿ ಉದ್ಯೋಗದಲ್ಲಿ ಇರುವ ಮಹಿಳೆ ಅರ್ಜಿ ಸಲ್ಲಿಸುವಂತಿಲ್ಲ.

ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಯಾವುದು ಎಂಬುದನ್ನು ತಿಳಿದುಕೊಳ್ಳಲು https://sevasindhu.karnataka.gov.in/gramaone/center_kan.html ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿದುಕೊಳ್ಳಿ

Opportunity to Apply for Gruha Lakshmi Yojana and Corrections

Our Whatsapp Channel is Live Now 👇

Whatsapp Channel

Related Stories