ಹೊಸ ರೇಷನ್ ಕಾರ್ಡ್ ಪಡೆಯಲು ಮತ್ತೆ ಅವಕಾಶ; ಅರ್ಜಿ ಸಲ್ಲಿಸಲು ಇದುವೇ ಕೊನೆಯ ಚಾನ್ಸ್
ರಾಜ್ಯ ಸರ್ಕಾರ (State government) ಜಾರಿಗೆ ತಂದಿರುವ ಎಲ್ಲಾ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ (ration card) ಅಗತ್ಯವಾಗಿ ಬೇಕಾಗಿರುವ ದಾಖಲೆ ಎನ್ನುವುದು ಎಲ್ಲರಿಗೂ ಗೊತ್ತು.
ಆದರೆ ಈ ಯೋಜನೆಯ ಪ್ರಯೋಜನ ಸಾಕಷ್ಟು ಜನರಿಗೆ ಸಿಗದೇ ಇರುವುದಕ್ಕೂ ಕೂಡ ರೇಷನ್ ಕಾರ್ಡ್ ಕಾರಣವಾಗಿದೆ, ಹೇಗೆ ಅಂತೀರಾ? ಬಿಪಿಎಲ್ (BPL card) ಅಥವಾ ಎಪಿಎಲ್ (APL card) ರೇಷನ್ ಕಾರ್ಡ್ ಹೊಂದಿರುವವರು ಅನ್ನಭಾಗ್ಯ ಯೋಜನೆಯ (Annabhagya scheme) ಅಥವಾ ಗೃಹಲಕ್ಷ್ಮಿ ಯೋಜನೆಯ (Gruha lakshmi scheme) ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಆದರೆ ನಮ್ಮ ರಾಜ್ಯದಲ್ಲಿ ಇನ್ನೂ ಲಕ್ಷಾಂತರ ಜನರಿಗೆ ರೇಷನ್ ಕಾರ್ಡ್ ಲಭ್ಯವಾಗದೆ ಇರುವ ಕಾರಣ ಅಂತವರಿಗೆ ಯೋಜನೆಯ ಪ್ರಯೋಜನಗಳು ಕೂಡ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಮಹತ್ವದ ಆದೇಶ ಒಂದನ್ನು ಹೊರಡಿಸಿದೆ.
ನಿಮ್ಮ ಜಮೀನು, ಹೊಲ ಗದ್ದೆಗಳ ಸರ್ವೆ ಸ್ಕೆಚ್ ಅನ್ನು ಮೊಬೈಲ್ ಮೂಲಕವೇ ತಿಳಿದುಕೊಳ್ಳಿ
ರಾಜ್ಯ ಸರ್ಕಾರ ಈಗಾಗಲೇ ತಿಳಿಸಿರುವಂತೆ ಗ್ಯಾರಂಟಿ ಯೋಜನೆಗಳಿಗೆ (guarantee schemes) ರೇಷನ್ ಕಾರ್ಡ್ ಅತ್ಯಗತ್ಯವಾದ ದಾಖಲೆಯಾಗಿದ್ದು (ration card is important document) ಇದರಲ್ಲಿ ಕೆಲವು ತಿದ್ದುಪಡಿಗಳನ್ನು ಮಾಡಿಕೊಳ್ಳುವುದು ಕೂಡ ಅನಿವಾರ್ಯವಾಗಿದೆ.
ಉದಾಹರಣೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕು ಅಂದ್ರೆ ರೇಷನ್ ಕಾರ್ಡ್ ಮನೆಯ ಯಜಮಾನಿಯ ಹೆಸರಿನಲ್ಲಿಯೇ ಇರಬೇಕು ಇಲ್ಲಿಯವರೆಗೆ ಯಜಮಾನನ ಹೆಸರಿನಲ್ಲಿ ಇರುವ ರೇಷನ್ ಕಾರ್ಡ್ ಅನ್ನು ಮನೆಯ ಯಜಮಾನಿಯ ಹೆಸರಿಗೆ ಬದಲಾಯಿಸಬೇಕು.
ಇದಕ್ಕಾಗಿ ಸರ್ಕಾರ ಈಗಾಗಲೇ ಮೂರು ಬಾರಿ ರೇಷನ್ ಕಾರ್ಡ್ ತಿದ್ದುಪಡಿಗೆ (ration card correction) ಅವಕಾಶ ಮಾಡಿಕೊಟ್ಟಿದೆ. ಆದರೆ ತಾಂತ್ರಿಕ ದೋಷಗಳಿಂದಾಗಿ (technical error) ಸಾಕಷ್ಟು ಜನ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಹಾಗಾಗಿ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ ನೀಡಿ ಎಂದು ಮೊರೆ ಹೋಗಿದ್ದಾರೆ ಜನ.
ಗುಡಿಸಲು, ಹಳೆಯ ಮನೆ ಇರೋರಿಗೆ ಹೊಸ ಮನೆ ಕಟ್ಟಿಸಿ ಕೊಡುವ ಯೋಜನೆ! ಅರ್ಜಿ ಸಲ್ಲಿಸಿ
ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಇದೇ ಕೊನೆಯ ಅವಕಾಶ!
ರಾಜ್ಯದ್ಯಂತ ಮತ್ತೆ ಹೊಸ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವವರಿಗೆ ಅವಕಾಶ ಮಾಡಿಕೊಟ್ಟಿದೆ ಸರ್ಕಾರ. ರಾಜ್ಯಾದ್ಯಂತ ಇಂದು ಅಂದ್ರೆ ಡಿಸೆಂಬರ್ ಮೂರನೇ ತಾರೀಕಿಗೆ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ (apply for new ration card) ಸಲ್ಲಿಸುವವರಿಗೆ ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಅರ್ಜಿ ಸಲ್ಲಿಸಬಹುದು.
ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವವರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ನಿಮ್ಮ ಜಮೀನಿಗೆ ಕಾಲುದಾರಿ, ಬಂಡಿದಾರಿ ಇದೆಯೋ ಇಲ್ವೋ ಮೊಬೈಲ್‌ನಲ್ಲೇ ಚೆಕ್ ಮಾಡಿಕೊಳ್ಳಿ
ಆದರೆ ಸರ್ಕಾರ ಕೇವಲ ಒಂದು ದಿನ ಅದರಲ್ಲೂ ಅರ್ಧ ದಿನಗಳು ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು ಜನರ ಆಕ್ರೋಶಕ್ಕೂ ಕೂಡ ಕಾರಣವಾಗಿದೆ. ಇಷ್ಟು ಸಣ್ಣ ಸಮಯದಲ್ಲಿ ಎಲ್ಲರೂ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಹಾಗಾಗಿ ಅವಧಿ ವಿಸ್ತರಣೆ ಮಾಡಬೇಕು ಎಂದು ಜನರು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ ಹಾಗಾಗಿ ಸರ್ಕಾರ ಈ ನಿಟ್ಟಿನಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.
opportunity to apply for new ration card, Get BPL and APL Cards
Our Whatsapp Channel is Live Now 👇