ಗ್ರಾಮ ಪಂಚಾಯತಿ ಚುನಾವಣೆ ಯಾವಾಗ? ದಿನಾಂಕದ ಸುಳಿವು ಕೊಟ್ಟ ಸರ್ಕಾರ
Karnataka Elections: ಕರ್ನಾಟಕದಲ್ಲಿ ಬಾಕಿಯಿರುವ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳಿಗೆ ಸರ್ಕಾರ ಸಿದ್ಧತೆ ಆರಂಭಿಸಿದ್ದು, 2027ರ ಜನವರಿಯಲ್ಲಿ ಪ್ರಮುಖ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಬೆಂಗಳೂರು (Bengaluru): ರಾಜ್ಯದಲ್ಲಿ ಬಹಳ ದಿನಗಳಿಂದ ಬಾಕಿ ಉಳಿದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ (Karnataka Elections) ಇದೀಗ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪಂಚಾಯತ್ ಚುನಾವಣೆ ಕುರಿತು ಮಹತ್ವದ ಚರ್ಚೆ ನಡೆದಿದೆ.
ಮೊದಲ ಹಂತದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ. 2027ರ ಜನವರಿ ಮೊದಲ ವಾರದಲ್ಲೇ ಚುನಾವಣೆ ಪೂರ್ಣಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಜನವರಿ 15ರೊಳಗೆ ಮತದಾನ ಪ್ರಕ್ರಿಯೆ ನಡೆಸುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಇದನ್ನೂ ಓದಿ: ಜಿಪಂ, ತಾಪಂ ಮೀಸಲು ಕರಡು ಅಧಿಸೂಚನೆ ನಾಳೆಯೇ ಪ್ರಕಟ: ಈಶ್ವರ ಖಂಡ್ರೆ
ಇದರ ಬೆನ್ನಲ್ಲೇ ಚುನಾವಣಾ ಸಿದ್ಧತೆಗಳೂ ಚುರುಕುಗೊಂಡಿವೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ವರ್ಗವಾರು ಮೀಸಲಾತಿ ಸ್ಥಾನಗಳ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ರಾಜ್ಯದಲ್ಲಿ ಒಟ್ಟು 1,129 ಜಿಲ್ಲಾ ಪಂಚಾಯಿತಿ ಮತ್ತು 3,656 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ವರ್ಗವಾರು ಮೀಸಲಾತಿ ಪ್ರಕಟಿಸಲಾಗಿದೆ.
ಗ್ರಾಮ ಪಂಚಾಯತಿ ಚುನಾವಣೆ
ಇನ್ನು ಗ್ರಾಮ ಪಂಚಾಯತ್ ಚುನಾವಣೆಗೂ ಸಂಬಂಧಿಸಿದಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮುಗಿದ ಬಳಿಕ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: ಹಾಫ್ ಹೆಲ್ಮೆಟ್ ಬಳಕೆ ನಿಷೇಧ, ಉಲ್ಲಂಘಿಸಿದರೆ ದಂಡ! ಸಾರಿಗೆ ಇಲಾಖೆ ಕಟ್ಟುನಿಟ್ಟಿನ ಆದೇಶ
ಗ್ರಾಮ ಪಂಚಾಯತ್ ಚುನಾವಣೆಯ ಪ್ರಕ್ರಿಯೆಯನ್ನು ಡಿಸೆಂಬರ್‌ನಲ್ಲಿ ಆರಂಭಿಸಿ, 2027ರ ಜನವರಿ ಮೊದಲ ವಾರದಲ್ಲಿ ಚುನಾವಣೆ ಪೂರ್ಣಗೊಳಿಸುವ ಯೋಜನೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ಮುಂದಿನ ತಿಂಗಳುಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಚುನಾವಣಾ ಚಟುವಟಿಕೆ ಮತ್ತಷ್ಟು ಗರಿಗೆದರಲಿದೆ.
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



