ಹುಬ್ಬಳ್ಳಿ: ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಪೊಲೀಸರು ಅವಳಿ ನಗರಗಳಲ್ಲಿ ದರೋಡೆಗಳನ್ನು ನಡೆಸುತ್ತಿದ್ದ ಗುಜರಾತಿ ದರೋಡೆಕೋರರ ಕಾಲಿಗೆ ಗುಂಡಿಕ್ಕಿ ಬಂಧಿಸಿ, ಅವರೊಂದಿಗೆ ಇದ್ದ ಮೂವರಿಗಾಗಿ ಹುಡುಕಾಟ ನಡೆಸಿದ್ದಾರೆ.
- ದರೋಡೆ ಪ್ರಯತ್ನಕ್ಕೆ ತೆರಳಿದ್ದ ದರೋಡೆಕೋರರು
- ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
- ಮೂವರು ಕಳ್ಳರು ಪರಾರಿಯಾಗಿದ್ದು, ಅವರಿಗಾಗಿ ಹುಡುಕಾಟ.
ಹುಬ್ಬಳ್ಳಿಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ, ದರೋಡೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಘಟನೆ ಸೋಮವಾರ ತಡರಾತ್ರಿ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಂಧಿತರು ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಎಂದು ಗುರುತಿಸಲಾಗಿದೆ.
ಈ ಇಬ್ಬರು ದರೋಡೆಕೋರರು ಮತ್ತು ಅವರ ತಂಡವು ಕೃತ್ಯ ನಡೆಸಲು ಬೈಕ್ ಸವಾರರನ್ನು ಸುಲಿಗೆ ಮಾಡಿದ್ದರು. ನಂತರ, ಒಂದು ಮನೆಯನ್ನೂ ದರೋಡೆ ಮಾಡಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದಾಗ, ಪೊಲೀಸರು ಸಮಯೋಚಿತವಾಗಿ ಕಾರ್ಯಚರಣೆಯನ್ನು ಪ್ರಾರಂಭಿಸಿದ್ದರು.
ಈ ವೇಳೆ ದುಷ್ಕರ್ಮಿಗಳು ಪರಾರಿಯಾಗಲು ಪ್ರಯತ್ನಿಸಿದಾಗ, ಪೊಲೀಸರು ತಕ್ಷಣ ಸ್ಪಂದಿಸಿ ಅವರುಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ
ಸದ್ಯ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿಕಳುಹಿಸಲಾಗಿದೆ. ಆದರೆ, ತಂಡದ ಮೂವರು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಕಾರ್ಯಚರಣೆ ಮುಂದುವರೆದಿದೆ. ಈ ಸಂದರ್ಭದಲ್ಲಿ, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಕೂಡ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ಸಿಬ್ಬಂದಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
Police Arrest Robbers in Hubballi After Shootout
Read more news on our Partner Site, across various topics in English
- Wife Files FIR
- Notorious Gang Busted
- Karwar Burglary Case
- Bengaluru BMTC Bus Crew
- BDA Exposes 730 Encroached Lakes