Crime News: ಕೋಲಾರ ಬಂಗಾರಪೇಟೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯ ವಶ
ಬಂಗಾರಪೇಟೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರುಪೇಟೆಯಿಂದ ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಾಗಿಸಲಾಗುತ್ತಿದೆ ಎಂಬ ಸುಳಿವು ಬಂಗಾರಪೇಟೆ ಪೊಲೀಸರಿಗೆ ಸಿಕ್ಕಿತ್ತು.
ಕೋಲಾರ (Kolar Crime News): ಬಂಗಾರಪೇಟೆಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರುಪೇಟೆಯಿಂದ (Bangarapet) ಆಂಧ್ರಪ್ರದೇಶದ ವಿಶಾಖಪಟ್ಟಣಕ್ಕೆ ಅಕ್ರಮವಾಗಿ ಮದ್ಯದ ಬಾಟಲಿಗಳನ್ನು ಸಾಗಿಸಲಾಗುತ್ತಿದೆ ಎಂಬ ಸುಳಿವು ಬಂಗಾರಪೇಟೆ ಪೊಲೀಸರಿಗೆ ಸಿಕ್ಕಿತ್ತು.
ಇದರಿಂದ ಬಂಗಾರಪೇಟೆ ಪೊಲೀಸರು ನಗರದ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ಆಗ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ಪೊಲೀಸರು ಹಿಡಿದು ವಿಚಾರಣೆ ನಡೆಸಿದ್ದಾರೆ. ಅವರ ಬಳಿಯಿದ್ದ ಬ್ಯಾಗ್ ಗಳನ್ನು ಶೋಧಿಸಿದದಾಗ ಬ್ಯಾಗ್‌ಗಳಲ್ಲಿ ಮದ್ಯದ ಬಾಟಲಿಗಳು ಇರುವುದು ಪತ್ತೆಯಾಗಿದೆ.
ತಕ್ಷಣ ಪೊಲೀಸರು ಬ್ಯಾಗ್ ಗಳನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ 4 ಸಾವಿರ ರೂ.ಮೌಲ್ಯದ 46.5 ಲೀಟರ್ ಮದ್ಯ ಪತ್ತೆಯಾಗಿದೆ. ತಕ್ಷಣ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ತನಿಖೆ ವೇಳೆ ಈತ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೂಲದ ವೆಂಕಟಕೃಷ್ಣ ಎಂಬುವುದು ಬೆಳಕಿಗೆ ಬಂದಿದೆ.
ಇಲ್ಲಿಂದ ಕಡಿಮೆ ಬೆಲೆಗೆ ಮದ್ಯದ ಬಾಟಲಿಗಳನ್ನು ಖರೀದಿಸಿ ಆಂಧ್ರಪ್ರದೇಶಕ್ಕೆ ಹೋಗಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬುದು ಬಯಲಾಗಿದೆ. ಮತ್ತು ಈ ನಿಟ್ಟಿನಲ್ಲಿ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.
Police have recovered illegally smuggled alcoholic beverages in Kolar Bangarapet
Follow us On
Google News |
Advertisement